ಗೃಹ ಸಾಲ ನೀಡುವ ದೇಶದ ಪ್ರಮುಖ ಖಾಸಗಿ ಬ್ಯಾಂಕ್ ಎಚ್‌ಡಿಎಫ್‌ಸಿ , ವಿವಿಧ ರೀತಿಯ ಠೇವಣಿಗಳ ಬಡ್ಡಿ ದರದಲ್ಲಿ ಶೇ.0.25 ರಷ್ಟು ಕಡಿತಗೊಳಿಸಿದೆ.
ವಿವಿಧ ಠೇವಣಿಗಳ ಬಡ್ಡಿದರಗಳಲ್ಲಿ ಶೇ.0.25ರಷ್ಟು ಬಡ್ಡಿ ದರಗಳನ್ನು ಕಡಿತಗೊಳಿಸಲಾಗಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಎಚ್‌ಡಿಎಫ್‌ಸಿ ವಕ್ತಾರರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ದೇಶದ ಖಾಸಗಿ ಬ್ಯಾಂಕ್ ಕ್ಷೇತ್ರದಲ್ಲಿ ಎರಡನೇ ಸ್ಥಾನದಲ್ಲಿರುವ ಎಚ್‌ಡಿಎಫ್‌ಸಿ ಲಿಮಿಟೆಡ್ ಕೂಡಾ ಠೇವಣಿ ಬಡ್ಡಿ ದರದಲ್ಲಿ ಶೇ.0.25 ರಷ್ಟು ಕಡಿತಗೊಳಿಸಿದ್ದು, ನಾಳೆಯಿಂದ ಜಾರಿಗೆ ಬರಲಿದೆ ಎಂದು ಎಚ್‌ಡಿಎಫ್‌ಸಿ ಕಾರ್ಯಕಾರಿ ನಿರ್ದೇಶಕ ಪರೇಶ್ ಸುಖಾಂತನ್‌ಕರ್ ತಿಳಿಸಿದ್ದಾರೆ.
ಇತ್ತೀಚೆಗೆ ನಡೆದ ಆರ್ಥಿಕ ಬೆಳವಣಿಗೆಗಳು ಹಾಗೂ ಮಾರುಕಟ್ಟೆಗಳ ಸ್ಥಿತಿಗತಿಯನ್ನು ಗಮನದಲ್ಲಿಟ್ಟುಕೊಂಡು ಬಡ್ಡಿ ದರದಲ್ಲಿ ಕಡಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಐಸಿಐಸಿಐ ಬ್ಯಾಂಕ್‌ಗಳು ಈಗಾಗಲೇ ಬಡ್ಡಿ ದರದಲ್ಲಿ ಕಡಿತಗೊಳಿಸಿ ಆದೇಶ ಹೊರಡಿಸಿವೆ. |