ಠೇವಣಿ ಹಾಗೂ ಸಾಲದ ಮೇಲಿನ ಬಡ್ಡಿದರದಲ್ಲಿ 50 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಲಾಗಿದೆ ಎಂದು ಯುಕೋ ಬ್ಯಾಂಕ್ ಪ್ರಕಟಿಸಿದೆ.
ಯುಕೋ ಬ್ಯಾಂಕ್‌ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಸ್.ಕೆ.ಗೋಯಲ್ ಮಾತನಾಡಿ ,ಬಡ್ಡಿದರ ಕಡಿತ ಜೂನ್ 27 ರಿಂದ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. . ಈಗಾಗಲೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಚ್‌ಡಿಎಫ್‌ಸಿ ,ಐಸಿಐಸಿಐ ಬ್ಯಾಂಕ್‌ಗಳು ಸೇರಿದಂತೆ ಹಲವು ಬ್ಯಾಂಕ್‌ಗಳು ಭಾರತೀಯ ರಿಸರ್ವ್ ಬ್ಯಾಂಕ್‌ನ ನಿರ್ದೇಶನದ ಮೇರೆಗೆ ಬಡ್ಡಿ ದರವನ್ನು ಕಡಿತಗೊಳಿಸಿವೆ.
ಜಾಗತಿಕ ಆರ್ಥಿಕ ಬಿಕ್ಕಟ್ಟಿನಿಂದಾಗಿ ದೇಶಿಯ ಆರ್ಥಿಕತೆ ಕುಸಿದ ಹಿನ್ನೆಲೆಯಲ್ಲಿ ಹಲವು ಕ್ಷೇತ್ರಗಳಿಗೆ ಉತ್ತೇಜನ ನೀಡಲು ಬ್ಯಾಂಕ್‌ಗಳ ಬಡ್ಡಿ ದರ ಕಡಿತಗೊಳಿಸಲಾಗಿದ್ದು , ಮುಂಬರುವ ದಿನಗಳಲ್ಲಿ ಮತ್ತಷ್ಟು ಕಡಿತವಾಗುವ ಸಾಧ್ಯತೆಗಳಿವೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ. |