ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಶೀಘ್ರದಲ್ಲಿ ಏರಿಕೆ ಮಾಡುವ ಸಾಧ್ಯತೆಗಳಿಲ್ಲ ಎಂದು ಪೆಟ್ರೋಲಿಯಂ ಖಾತೆ ಸಚಿವ ಮುರಳಿ ದಿಯೋರಾ ದರ ಏರಿಕೆಯನ್ನು ತಳ್ಳಿಹಾಕಿದ್ದಾರೆ.ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಏರಿಕೆಯಾಗಲಿದೆ ಎನ್ನುವ ವರದಿಗಳ ಕುರಿತಂತೆ ದಿಯೋರಾ ಅವರನ್ನು ಪ್ರಶ್ನಿಸಿದಾಗ ಸಧ್ಯ ಅಂತಹ ಯಾವುದೇ ಪ್ರಸ್ತಾವನೆಗಳು ನಮ್ಮ ಮಂದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಪೆಟ್ರೋಲಿಯಂ ಇಲಾಖೆಯ ಹಿರಿಯ ಅಧಿಕಾರಿಗಳು ಪೆಟ್ರೋಲ್‌ಗೆ 2 ರೂಪಾಯಿ ಹಾಗೂ ಡೀಸೆಲ್‌ಗೆ 1 ರೂಪಾಯಿ ಹೆಚ್ಚಳ ಮಾಡಲು ಸರಕಾರ ಚಿಂತಿಸುತ್ತಿದೆ ಎನ್ನುವ ಹೇಳಿಕೆಯ ನಂತರ ಪೆಟ್ರೋಲಿಯಂ ಖಾತೆ ಸಚಿವರ ಹೇಳಿಕೆ ಹೊರಬಿದ್ದಿದೆ. ಸರಕಾರಿ ಸ್ವಾಮ್ಯದ ತೈಲ ಕಂಪೆನಿಗಳು, ಪೆಟ್ರೋಲ್ , ಡೀಸೆಲ್,ಎಲ್‌ಪಿಜಿ ಮತ್ತು ಸೀಮೆಎಣ್ಣೆ ಮಾರಾಟದಲ್ಲಿ ಪ್ರತಿ ದಿನ 135 ಕೋಟಿ ರೂಪಾಯಿಗಳ ನಷ್ಟ ಅನುಭವಿಸುತ್ತಿದ್ದು, ವಾರ್ಷಿಕವಾಗಿ 38,700 ಕೋಟಿ ರೂಪಾಯಿಗಳ ನಷ್ಟವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |