ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಹೆದ್ದಾರಿ ಯೋಜನೆಗಳಿಗೆ ಕೇಂದ್ರದಿಂದ 19,000 ಕೋಟಿ ರೂ.
(Highways projects | Road Transport and Highways Ministry | Road | Highway)
ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿನ ಹೆದ್ದಾರಿಗಳನ್ನು ದ್ವಿಪಥ ಹೆದ್ದಾರಿಗಳನ್ನಾಗಿ ಪರಿವರ್ತಿಸಲಾಗುತ್ತಿದ್ದು, ಅದಕ್ಕಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು 19,000 ಕೋಟಿ ರೂಪಾಯಿಗಳನ್ನು ವ್ಯಯಿಸಲಿದೆ.
ಕರ್ನಾಟಕ, ಉತ್ತರ ಪ್ರದೇಶ, ಛತ್ತೀಸಗಢ, ಮಧ್ಯಪ್ರದೇಶ, ಒರಿಸ್ಸಾ, ಕೇರಳ, ರಾಜಸ್ತಾನ, ಉತ್ತರಾಂಚಲ, ತಮಿಳುನಾಡು, ಆಂಧ್ರಪ್ರದೇಶ, ಬಿಹಾರ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಪ್ರಸಕ್ತ ಇರುವ ಹೆದ್ದಾರಿಗಳನ್ನು ದ್ವಿಪಥವನ್ನಾಗಿ ಬದಲಾಯಿಸಲಾಗುತ್ತದೆ. ಇಲ್ಲಿ ಒಟ್ಟು 58 ಹೆದ್ದಾರಿಗಳನ್ನು ಯೋಜನೆಗೆ ಅಳವಡಿಸಿಕೊಳ್ಳಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.
ಈ ಯೋಜನೆಗಳನ್ನು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಅಥವಾ ಸಂಬಂಧಪಟ್ಟ ರಾಜ್ಯ ಸರಕಾರಗಳ ಮೂಲಕ ಒಂದು ವರ್ಷದ ಅವಧಿಯಲ್ಲಿ ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.
ಅಲ್ಲದೆ ಯೋಜನೆಗಳಿಗಾಗಿ ಅಗತ್ಯವಿರುವ ಬಿಡ್‌ಗಾಗಿ ಅರ್ಜಿದಾರರ ಅರ್ಹತೆಯನ್ನು ಇನ್ನಷ್ಟು ಸರಳೀಕರಣಗೊಳಿಸಲಾಗುತ್ತದೆ ಎಂದೂ ಸಚಿವಾಲಯ ತಿಳಿಸಿದೆ.