ಭಾರತದ ಮಾಹಿತಿ ತಂತ್ರಜ್ಞಾನ ರಫ್ತು ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಇನ್ಫೋಸಿಸ್ ಟೆಕ್ನಾಲಾಜೀಸ್,15,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದ್ದು,ಈಗಾಗಲೇ ಅಧಿಕಾರಿಗಳು ಕ್ಯಾಂಪಸ್‌ಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.
ಯುರೋಪ್ ಮತ್ತು ಇತರ ರಾಷ್ಟ್ರಗಳಲ್ಲಿರುವ ಐಟಿ ಕಂಪೆನಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಯೋಜನೆಗಳನ್ನು ರೂಪಿಸಿದೆ.ಕಂಪೆನಿಗೆ 15,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವ ಸಿದ್ಧತೆ ಆರಂಭಿಸಲಾಗಿದೆ ಎಂದು ಇನ್ಫೋಸಿಸ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಕ್ರಿಸ್ ಗೋಪಾಲ್‌ಕೃಷ್ಣನ್ ಹೇಳಿದ್ದಾರೆ.
ಇನ್ಫೋಸಿಸ್ ಉದ್ಯೋಗಿಗಳ ಸಂಬಳದಲ್ಲಿ ಶೇ.8ರಷ್ಟು ಏರಿಕೆಯನ್ನು ಮಾಡಲಾಗಿದ್ದು, ಏಪ್ರಿಲ್‌ನಲ್ಲಿ ನಡೆಯಲಿರುವ ವೇತನ ಪರಿಷ್ಕರಣದ ಬಗ್ಗೆ ಕಾದುನೋಡಬೇಕಾಗಿದೆ ಎಂದು ಹೇಳಿದ್ದಾರೆ.
ಜಾಗತಿಕ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಚೇತರಿಕೆ ಕಾಣುತ್ತಿರುವುದರಿಂದ, ಮುಂಬರುವ ಆರ್ಥಿಕ ವರ್ಷದಲ್ಲಿ ಅವಕಾಶಗಳಲ್ಲಿ ಹೆಚ್ಚಳವಾಗಲಿವೆ.ನಿವ್ವಳ ಲಾಭದಲ್ಲಿ ಕೂಡಾ ಏರಿಕೆಯಾಗುವ ಸಾಧ್ಯತೆಗಳಿವೆ ಗೋಪಾಲ್‌ಕೃಷ್ಣನ್ ತಿಳಿಸಿದ್ದಾರೆ.