ದೇಶದ ಅಗ್ರಬ್ಯಾಂಕ್ ಎನ್ನುವ ಖ್ಯಾತಿಪಡೆದ ಸ್ಟೇಟ್‌ಬ್ಯಾಂಕ್ ಆಫ್ ಇಂಡಿಯಾ, ಪ್ರಸಕ್ತ ವರ್ಷದಲ್ಲಿ 25ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಪ್ರಸಕ್ತ ವರ್ಷದ ಅವಧಿಯಲ್ಲಿ ವಿವಿಧ ಹಂತದ ಹುದ್ದೆಗಳಿಗಾಗಿ,25 ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದ್ದು, ಸಿದ್ಧತೆಗಳು ಆರಂಭವಾಗಿವೆ ಎಂದು ಎಸ್‌ಬಿಐ ಮುಖ್ಯಸ್ಥ ಒ.ಪಿ.ಭಟ್ ತಿಳಿಸಿದ್ದಾರೆ.ಕಳೆದ ವರ್ಷ 27 ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಭಟ್ ಹೇಳಿಕೆ ನೀಡಿದ್ದರು.
ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕ್ ಸೇವೆಯನ್ನು ವಿಸ್ತರಿಸುವ ಅಂಗವಾಗಿ, 4500 ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸ್ಟೇಟ್‌ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿಗಳು ತಿಳಿಸಿದ್ದಾರೆ.
25 ಸಾವಿರ ಉದ್ಯೋಗಿಗಳಲ್ಲಿ 11 ಸಾವಿರ ಕ್ಲರ್ಕ್ ಹುದ್ದೆಗಳಿಗೆ ಹಾಗೂ 481 ಅಧಿಕಾರಿಗಳು(ಗ್ರಾಮೀಣ) ಮತ್ತು ತಾಂತ್ರಿಕ ಹಾಗೂ ಅಧಿಕಾರಿಗಳ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಉಳಿದ ಉದ್ಯೋಗಿಗಳನ್ನು ಅಡಳಿತ ಸೇವೆಗೆ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಏತನ್ಮಧ್ಯೆ, ಕಳೆದ ವರ್ಷದಂತೆ ಪ್ರಸಕ್ತ ಡಿಸೆಂಬರ್2009ಕ್ಕೆ ತ್ರೈಮಾಸಿಕ ಅಂತ್ಯಗೊಂಡಂತೆ, ಎಸ್‌ಬಿಐ ಬ್ಯಾಂಕ್2,479 ಕೋಟಿ ರೂಪಾಯಿಗಳ ನಿವ್ವಳ ಲಾಭಗಳಿಸಿದೆ.