ಕೇಂದ್ರ ಸರಕಾರ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್‌ಗಳು ಘೋಷಿಸಿದ ಉತ್ತೇಜನ ಪ್ಯಾಕೇಜ್‌ಗಳು, ಮುಂಬರುವ ದಿನಗಳಲ್ಲಿ ಮತ್ತೊಂದು ಬಿಕ್ಕಟ್ಟಿಗೆ ಕಾರಣವಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಕರೆನ್ಸಿ ಅಥವಾ ಆರ್ಥಿಕ ನೀತಿಗಳ ರೂಪದಲ್ಲಿ ಉತ್ತೇಜನ ನೀತಿಗಳು ಬಿಕ್ಕಟ್ಟು ಸೃಷ್ಟಿಸುವ ಸಾಧ್ಯತೆಗಳಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ ಗವರ್ನರ್ ಡಿ.ಸುಬ್ಬಾರಾವ್ ಆಂತಕ ವ್ಯಕ್ತಪಡಿಸಿದ್ದಾರೆ.
ಆರ್ಥಿಕ ಕುಸಿತದಿಂದ ಚೇತರಿಕೆಗಾಗಿ ಘೋಷಿಸಿದ ಉತ್ತೇಜನ ಪ್ಯಾಕೇಜ್‌ಗಳಿಂದಾಗಿ ಮತ್ತೊಂದು ಬಿಕ್ಕಟ್ಟಿಗೆ ಕಾರಣವಾಗುವ ಆತಂಕ ಎದುರಾಗಿದೆ ಎಂದು ತಿಳಿಸಿದ್ದಾರೆ.
ಜಾಗತಿಕ ಆರ್ಥಿಕ ಕುಸಿತದಿಂದಾಗಿ ಅಮೆರಿಕ ಮತ್ತು ಯುರೋಪ್ ರಾಷ್ಟ್ರಗಳಿಗೆ ಬೆಂಬಲ ನೀಡುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹಾಗೂ ರಿಸರ್ವ್ ಬ್ಯಾಂಕ್ ಉತ್ತೇಜನ ಪ್ಯಾಕೇಜ್‌ಗಳನ್ನು ಘೋಷಿಸಿದೆ ಎಂದು ಆರ್‌ಬಿಐ ಗವರ್ನರ್ ಡಿ.ಸುಬ್ಬಾರಾವ್ ತಿಳಿಸಿದ್ದಾರೆ.