ಜಾಗತಿಕ ಮಾರುಕಟ್ಟೆಗಳ ಸ್ಥಿರ ವಹಿವಾಟಿನಿಂದಾಗಿ, ಚಿನ್ನದ ದರ ಪ್ರತಿ 10 ಗ್ರಾಂಗೆ 58 ರೂಪಾಯಿಗಳಷ್ಟು ಏರಿಕೆಯಾಗಿ 16,770 ರೂಪಾಯಿಗಳಿಗೆ ತಲುಪಿದೆ.
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಚಿನ್ನದ ದರದಲ್ಲಿ ಏರಿಕೆಯಾಗಿದ್ದರಿಂದ, ದೇಶಿಯ ಚಿನಿವಾರಪೇಟೆಯಲ್ಲಿ ಕೂಡಾ ಪ್ರತಿ 10ಗ್ರಾಂಗೆ 58 ರೂಪಾಯಿಗಳ ಏರಿಕೆಯಾಗಿ 16,770 ರೂಪಾಯಿಗಳಿಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನದ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಕಂಡಿದೆ ಎಂದು ಚಿನಿವಾರಪೇಟೆಯ ವರ್ತಕರು ತಿಳಿಸಿದ್ದಾರೆ.
ಏತನ್ಮಧ್ಯೆ, ಅಮೆರಿಕ ಚಿನ್ನದ ಮಾರುಕಟ್ಟೆಯಲ್ಲಿ ಪ್ರತಿ ಔನ್ಸ್‌ಗೆ 7.10 ಡಾಲರ್‌ಗಳ ಏರಿಕೆಯಾಗಿ, 1099.50 ಡಾಲರ್‌ಗಳಿಗೆ ತಲುಪಿದೆ.