ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ರೂಪಾಯಿ ಮೌಲ್ಯದಲ್ಲಿ ಬಲವರ್ಧನೆ (Rupee | Dollar | Asian currencies | Forex market)
Bookmark and Share Feedback Print
 
ಏಷ್ಯಾ ಮಾರುಕಟ್ಟೆಗಳ ಸ್ಥಿರ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ 23 ಪೈಸೆ ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಮಾರುಕಟ್ಟೆಯಲ್ಲಿ ನಿರಂತರ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ರೂಪಾಯಿ ಮೌಲ್ಯ ಚೇತರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 11 ಪೈಸೆ ಏರಿಕೆ ಕಂಡು 46.21/22 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 23ಪೈಸೆ ಏರಿಕೆ ಕಂಡು 45.98ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 200 ಪಾಯಿಂಟ್‌ಗಳ ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ