ಮಾರ್ಚ್‌ನಿಂದ ಹಾಲಿನ ದರ ಹೆಚ್ಚಳವಾಗುವುದು ಇದೀಗ ಬಹುತೇಕ ಖಚಿತವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೆಎಂಎಫ್ ಅಧ್ಯಕ್ಷ ಶಾಸಕ ಜಿ. ಸೋಮಶೇಖರ ರೆಡ್ಡಿ, ಪ್ರತಿ ಲೀಟರ್ ಹಾಲು ಉತ್ಪಾದನೆ ವೆಚ್ಚ 15.67 ಆಗುತ್ತಿದ್ದು, ಪ್ರತಿ ಲೀಟರ್‌ಗೆ 2 ರೂ. ಹೆಚ್ಚಳ ಮಾಡುವುದು ಅನಿವಾರ್ಯ ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಹಾಲಿನ ದರವನ್ನು ತಲಾ ಲೀಟರ್‌ಗೆ 3-4 ರೂ. ಹೆಚ್ಚಿಸಬೇಕೆಂಬ ನಿರ್ಧಾರಕ್ಕೆ ಬರಲಾಗಿದೆ. ಈ ಪ್ರಸ್ತಾಪವನ್ನು ಮುಖ್ಯಮಂತ್ರಿಯವರಿಗೂ ಸಲ್ಲಿಸಲಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅಲ್ಲದೆ, ಇದೇ ತಿಂಗಳ 20ರಂದು ಕೆಎಂಎಫ್ ಆಡಳಿತ ಮಂಡಳಿ ಜತೆ ಚರ್ಚಿಸಲು ಮುಖ್ಯಮಂತ್ರಿಗಳು ಸಮಯ ನಿಗದಿ ಪಡಿಸಿದ್ದಾರೆ. ಚರ್ಚೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಕರ್ನಾಟಕಕ್ಕೆ ಹೋಲಿಸಿದರೆ ಉಳಿದ ರಾಜ್ಯಗಳಲ್ಲಿ ಹಾಲಿನ ದರ 8 ರೂ. ಹೆಚ್ಚಾಗಿದೆ. ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಕೂಡ ಹಾಲಿನ ದರ ಹೆಚ್ಚಳ ಮಾಡಲೇ ಬೇಕಾದ ಅಗತ್ಯತೆಯನ್ನು ಒತ್ತಿ ಹೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಶಾಸಕ ಜಿ. ಸೋಮಶೇಖರ ರೆಡ್ಡಿ ತಿಳಿಸಿದ್ದಾರೆ.