ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ರೂಪಾಯಿ ಮೌಲ್ಯದಲ್ಲಿ ಬಲವರ್ಧನೆ (Rupee|Dollar| Forex | Market)
Bookmark and Share Feedback Print
 
ಏಷ್ಯಾ ಮಾರುಕಟ್ಟೆಗಳ ಸ್ಥಿರ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ 20 ಪೈಸೆ ಚೇತರಿಕೆ ಕಂಡು 46.10 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ, 2ಪೈಸೆ ಏರಿಕೆ ಕಂಡು 46.30/31ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ, ಮತ್ತೆ 20 ಪೈಸೆ ಏರಿಕೆ ಕಂಡು 46.10 ರೂಪಾಯಿಗಳಿಗೆ ತಲುಪಿದೆ.

ಏಷ್ಯನ್ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಕುಸಿತಗೊಂಡಿದ್ದರಿಂದ, ರೂಪಾಯಿ ಮೌಲ್ಯದ ಚೇತರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಮತ್ತೊಂದೆಡೆ,ಮಾರುಕಟ್ಟೆಗಳ ಸಬಲ ವಹಿವಾಟಿನಿಂದಾಗಿ, ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗಿರುವುದು ಕೂಡಾ ರೂಪಾಯಿ ಚೇತರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆ ಸೂಚ್ಯಂಕ, ಆರಂಭಿಕ ವಹಿವಾಟಿನಲ್ಲಿ 230 ಪಾಯಿಂಟ್‌ಗಳ ಏರಿಕೆ ಕಂಡು 16,421.38 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ