ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯದಲ್ಲಿ 2ಪೈಸೆ ಕುಸಿತ (Rupee| Dollar | Forex | Market,)
Bookmark and Share Feedback Print
 
ವಿದೇಶಿ ಬಂಡವಾಳದ ಹೊರಹರಿವು ಹಾಗೂ ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಏರಿಕೆಯಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 2ಪೈಸೆ ಕುಸಿತ ಕಂಡಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 9 ಪೈಸೆ ಏರಿಕೆ ಕಂಡು 46.21/22 ರೂಪಾಯಿಗಳಿಗೆ ತಲುಪಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ 2ಪೈಸೆ ಕುಸಿತ ಕಂಡು 46.23 ರೂಪಾಯಿಗಳಿಗೆ ತಲುಪಿದೆ.

ಮಾರುಕಟ್ಟೆಗಳ ದುರ್ಬಲ ವಹಿವಾಟು ಹಾಗೂ ಇತರ ಕರೆನ್ಸಿಗಳ ಎದುರು ಡಾಲರ್ ಚೇತರಿಕೆ ಕಂಡ ಹಿನ್ನೆಲೆಯಲ್ಲಿ, ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 58.14ರಷ್ಟು ಕುಸಿತ ಕಂಡು, 16,178.91 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ