ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದಲ್ಲಿ ಚೇತರಿಕೆಯಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ 2ಪೈಸೆ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 3ಪೈಸೆ ಕುಸಿತ ಕಂಡು 46.24/25 ರೂಪಾಯಿಗಳಿಗೆ ತಲುಪಿತ್ತು.ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ 2ಪೈಸೆ ಕುಸಿತ ಕಂಡು 46.26 ರೂಪಾಯಿಗಳಿಗೆ ತಲುಪಿದೆ
ಮಾಸಾಂತ್ಯದಿಂದಾಗಿ ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಏತನ್ಮಧ್ಯೆ,ಮುಂಬೈ ಶೇರುಪೇಟೆಯ ಸೂಚ್ಯಂಕ 98.88 ಪಾಯಿಂಟ್‌ಗಳ ಕುಸಿತ ಕಂಡು, 16,187.44 ಅಂಕಗಳಿಗೆ ತಲುಪಿದೆ.