ಲೋಕಸಭೆಯಲ್ಲಿ ಇಂದು ರೈಲ್ವೆ ಬಜೆಟ್ ಮಂಡಿಸಿದ ಸಚಿವೆ ಮಮತಾ ಬ್ಯಾನರ್ಜಿ, ಬಜೆಟ್‌ನಲ್ಲಿ ಕ್ಯಾನ್ಸರ್ ರೋಗಿಗಳಿಗೆ ಶೇ.100ರಷ್ಟು ಸಂಪೂರ್ಣ ರಿಯಾಯತಿಯನ್ನು ಘೋಷಿಸಿದ್ದಾರೆ.
ಚಿಕಿತ್ಸೆಗಾಗಿ ತೆರಳುವ ಕ್ಯಾನ್ಸರ್ ರೋಗಿಗಳಿಗೆ ತ್ರಿ ಟೈರ್ ಎಸಿ ಹಾಗೂ ಸ್ಲೀಪರ್ ಕ್ಲಾಸ್‌ಗಳಲ್ಲಿ, ಉಚಿತವಾಗಿ ಪ್ರಯಾಣಿಸಬಹುದು ಎಂದು ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಇಲ್ಲಿಯವರೆಗೆ ಚಿಕಿತ್ಸೆಗಾಗಿ ತೆರಳುವ ಕ್ಯಾನ್ಸರ್ ರೋಗಿಗಳು ಹಾಗೂ ಅವರ ಸಹಾಯಕರಿಗೆ, ತ್ರಿ ಟೈರ್ ಎಸಿ ಹಾಗೂ ಸ್ಲೀಪರ್ ಕ್ಲಾಸ್‌ಗಳಲ್ಲಿ ಶೇ.70ರಷ್ಟು ರಿಯಾಯಿತಿ ಟಿಕೆಟ್ ದರವನ್ನು ಘೋಷಿಸಲಾಗಿತ್ತು.ಆದರೆ ಪ್ರಸಕ್ತ ಬಜೆಟ್‌ನಲ್ಲಿ ಶೇ.100ರಷ್ಟು ರಿಯಾಯತಿಗಳನ್ನು ಘೋಷಿಸಲಾಗಿದೆ ಎಂದು ಬ್ಯಾನರ್ಜಿ ತಿಳಿಸಿದ್ದಾರೆ.