ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯದಲ್ಲಿ 4 ಪೈಸೆ ಕುಸಿತ (Rupee|Dollar | Forex | Market)
Bookmark and Share Feedback Print
 
ಜಾಗತಿಕ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದಲ್ಲಿ ಚೇತರಿಕೆಯಾಗಿದ್ದರಿಂದ ರೂಪಾಯಿ ಮೌಲ್ಯದಲ್ಲಿ 4 ಪೈಸೆ ಕುಸಿತವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 8 ಪೈಸೆ ಕುಸಿತ ಕಂಡು 46.32/33 ರೂಪಾಯಿಗಳಿಗೆ ತಲುಪಿತ್ತು.ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 4 ಪೈಸೆ ಕುಸಿತ ಕಂಡು 46.32ರೂಪಾಯಿಗಳಿಗೆ ತಲುಪಿದೆ.

ಮಾಸಾಂತ್ಯದ ಹಿನ್ನೆಲೆಯಲ್ಲಿ ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 73ಪಾಯಿಂಟ್‌ಗಳ ಏರಿಕೆ ಕಂಡು,16,329.33 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ