ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆ ಮಂಡನೆ: ಪ್ರಣಬ್ ಮುಖರ್ಜಿ (Economic Survey | Finance Minister | Pranab Mukherjee | Federal budget)
ಲೋಕಸಭೆಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ 2009-10ರ ಆರ್ಥಿಕ ಸಾಲಿನ ಸಮೀಕ್ಷೆಯನ್ನು ಕೇಂದ್ರದ ವಿತ್ತ ಖಾತೆ ಸಚಿವ ಪ್ರಣಬ್ ಮುಖರ್ಜಿ ಮಂಡಿಸಿದ್ದಾರೆ.
ಪ್ರಸಕ್ತ ಆರ್ಥಿಕ ವರ್ಷದಲ್ಲಿ ಜಿಡಿಪಿ ದರ ಶೇ.7.2ಕ್ಕೆ ತಲುಪುವ ವಿಶ್ವಾಸ ವ್ಯಕ್ತಪಡಿಸಿದ್ದು, ಮುಂಬರುವ 2011-12ರಲ್ಲಿ ದೇಶದ ಆರ್ಥಿಕತೆ ಸಂಪೂರ್ಣ ಚೇತರಿಕೆ ಕಾಣಲಿದೆ ಎಂದು ಹೇಳಿದ್ದಾರೆ.
ಹಣದುಬ್ಬರ ಹಾಗೂ ಆರ್ಥಿಕ ಕುಸಿತದ ಮಧ್ಯೆಯು ಭಾರತದ ಆರ್ಥಿಕತೆ ಸುಸ್ಥಿತಿಗೆ ಮರಳುತ್ತಿದೆ. ಮುಂಬರುವ 2010-11ರ ಅವಧಿಯಲ್ಲಿ ಜಿಡಿಪಿ ದರ ಶೇ.8.25-8.75ಕ್ಕೆ ತಲುಪುವ ನಿರೀಕ್ಷೆಯಿದೆ ಹಾಗೂ ಶೇ.9ಕ್ಕೆ ವಿಸ್ತರಣೆಗೊಳ್ಳಬಹುದಾಗಿದೆ.
ವಿಶ್ವ ಆರ್ಥಿಕತೆಯಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಭಾರತಕ್ಕೆ ಎರಡಂಕಿ ಅಭಿವೃದ್ಧಿಯನ್ನು ಸಾಧಿಸಲು ಸಂಪೂರ್ಣ ಸಾಧ್ಯವಿದೆ.ಮುಂಬರುವ ನಾಲ್ಕು ವರ್ಷಗಳಲ್ಲಿ ಬಲಾಢ್ಯ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ಸಮೀಕ್ಷೆಯಲ್ಲಿ ಪ್ರಕಟಿಸಲಾಗಿದೆ.
ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕೈಗಾರಿಕೆ ಅಭಿವೃದ್ಧಿ ದರ, ಶೇ.8.2ಕ್ಕೆ ತಲುಪುವ ಸಾಧ್ಯತೆಗಳಿವೆ ಎಂದು ಸಮೀಕ್ಷಾ ವರದಿಯಲ್ಲಿ ಬಹಿರಂಗಪಡಿಸಲಾಗಿದೆ.
ಏತನ್ಮಧ್ಯೆ, ಮುಂಬರುವ ಕೆಲ ತಿಂಗಳುಗಳವರೆಗೆ ಹಣದುಬ್ಬರ ಕಳವಳ ಮುಂದುವರಿಯಲಿದೆ. ಉತ್ತೇಜನ ಪ್ಯಾಕೇಜ್‌ಗಳನ್ನು ಹಿಂಪಡೆಯುವ ಮುನ್ನ, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಬೇಕಾಗಿದೆ ಎಂದು ವಿತ್ತಸಚಿವ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ.