ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಮಿತ್ರಪಕ್ಷಗಳೊಂದಿಗೆ ಸರಕಾರ ಚರ್ಚೆಗೆ ಸಿದ್ಧ:ಪ್ರಣಬ್ (Finance Minister | Pranab Mukherjee | Government | Fuel price | Hike)
Bookmark and Share Feedback Print
 
ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ ಕುರಿತಂತೆ ಸರಕಾರ ಮಿತ್ರಪಕ್ಷಗಳೊಂದಿಗೆ ಚರ್ಚಿಸಲಿದ್ದು,ಆದರೆ ದರ ಏರಿಕೆಯನ್ನು ಹಿಂದಕ್ಕೆ ಪಡೆಯುವುದು ತುಂಬಾ ಕಷ್ಟಸಾಧ್ಯ ಎಂದು ವಿತ್ತಸಚಿವ ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ಪಕ್ಷದ ಮೂಲಗಳ ಪ್ರಕಾರ, ವಿತ್ತಸಚಿವ ಪ್ರಣಬ್ ಮುಖರ್ಜಿ ಕಾಂಗ್ರೆಸ್ ಪಕ್ಷದ ಸಂಸದರಿಗೆ ಬಜೆಟ್‌ನ ವಿವರಗಳನ್ನು ಒದಗಿಸಿದ್ದು, ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ ಹಾಗೂ ತೆರಿಗೆ ಏರಿಕೆಯನ್ನು ಕಡಿತಗೊಳಿಸುವುದರಿಂದ ಯಾವ ರೀತಿ ಋಣಾತ್ಮಕ ಪರಿಣಾಮಗಳು ಬೀರುತ್ತವೆ ಎನ್ನುವ ಬಗ್ಗೆ ಮಾಹಿತಿ ಒದಗಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಆರ್ಥಿಕ ವರ್ಷದಲ್ಲಿ ಸರಕಾರದ ಮುಂದಿರುವ ಸವಾಲುಗಳ ಕುರಿತಂತೆ ವಿತ್ತಸಚಿವ ಪ್ರಣಬ್ ಮುಖರ್ಜಿ, ಕಾಂಗ್ರೆಸ್ ಸಂಸದರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ ಹಾಗೂ ತೆರಿಗೆ ದರ ಏರಿಕೆಯಿಂದಾಗಿ, ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಆರ್ಥಿಕ ವೃದ್ಧಿ ದರ ಶೇ.7.2ರಿಂದ ಶೇ.8.5ಕ್ಕೆ ತಲುಪುವ ನಿರೀಕ್ಷೆಯಿದೆ ಎಂದು ವಿತ್ತಸಚಿವ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ