ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » 2010-11ರಲ್ಲಿ ಏರಿಂಡಿಯಾಗೆ 1200 ಕೋಟಿ ರೂ:ಪ್ರಫುಲ್ (Air India | Praful Patel | Annual budget | Next fiscal| Equity infusion)
Bookmark and Share Feedback Print
 
ಬಜೆಟ್‌ನಲ್ಲಿ ನಿಗದಿಪಡಿಸಿದಂತೆ ಮುಂಬರುವ ಆರ್ಥಿಕ ವರ್ಷದಲ್ಲಿ ರಾಷ್ಟ್ರೀಯ ವಿಮಾನಯಾನ ಸಂಸ್ಥೆ ಏರಿಂಡಿಯಾ, ಕೇಂದ್ರದಿಂದ 1200 ಕೋಟಿ ರೂಪಾಯಿ ಆರ್ಥಿಕ ಸಹಾಯ ಪಡೆಯಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ತಿಳಿಸಿದ್ದಾರೆ.

ಕಳೆದ ತಿಂಗಳು ಕೇಂದ್ರ ಸರಕಾರ ಏರಿಂಡಿಯಾಗೆ 800 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಿತ್ತು. ಆದರೆ ಮುಂಬರುವ ವರ್ಷದ ಅವಧಿಯಲ್ಲಿ 1200 ಕೋಟಿ ರೂಪಾಯಿ ಹೂಡಿಕೆ ಮಾಡಲು ಬಜೆಟ್‌ನಲ್ಲಿ ಮೀಸಲಿರಿಸಿದೆ ಎಂದು ಸಚಿವ್ ಪಟೇಲ್ ತಿಳಿಸಿದ್ದಾರೆ.

ವಾರ್ಷಿಕ ಬಜೆಟ್‌ನಲ್ಲಿ ಏರ್‌ಇಂಡಿಯಾಗೆ 1200 ಕೋಟಿ ರೂಪಾಯಿಗಳನ್ನು ನೀಡಲು ಸರಕಾರ ಬದ್ಧವಾಗಿದೆ.ಹೂಡಿಕೆ ಕುರಿತಂತೆ ಏಪ್ರಿಲ್ 1ರ ನಂತರ ಸರಕಾರದೊಂದಿಗೆ ಚರ್ಚಿಸಲಾಗುವುದು ಎಂದು ಸಚಿವ ಪಟೇಲ್ ಹೇಳಿದ್ದಾರೆ.

ಸರಕಾರಿ ಸ್ವಾಮ್ಯದ ಏರ್‌ಇಂಡಿಯಾ, ಕಳೆದ ಎರಡು ವರ್ಷಗಳಲ್ಲಿ 7,200 ಕೋಚಟಿ ರೂಪಾಯಿಗಳ ನಷ್ಟ ಅನುಭವಿಸಿದೆ.ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿದಲ್ಲಿ ಮತ್ತೆ 800 ಕೋಟಿ ರೂಪಾಯಿಗಳ ಹೂಡಿಕೆ ಮಾಡಲಾಗುವುದು ಎಂದು ಸರಕಾರ ಆದೇಶ ಹೊರಡಿಸಿತ್ತು.
ಸಂಬಂಧಿತ ಮಾಹಿತಿ ಹುಡುಕಿ