ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಏಪ್ರಿಲ್‌ನಲ್ಲಿ ಸಿಬ್ಬಂದಿಗಳ ವೇತನ ಹೆಚ್ಚಳ:ಇನ್ಫೋಸಿಸ್ (Infosys | IT | Salary hike)
Bookmark and Share Feedback Print
 
ದೇಶದ ಎರಡನೇ ಬೃಹತ್ ಸಾಫ್ಟ್‌ವೇರ್ ರಫ್ತು ಸಂಸ್ಥೆಯಾದ ಇನ್ಫೋಸಿಸ್ ಟೆಕ್ನಾಲಾಜೀಸ್, ಮುಂಬರುವ ಏಪ್ರಿಲ್ ತಿಂಗಳ ಅವಧಿಯಲ್ಲಿ ಸಿಬ್ಬಂದಿಗಳ ವೇತನವನ್ನು ಹೆಚ್ಚಿಸಲು ನಿರ್ಧರಿಸಿದೆ ಎಂದು ಕಂಪೆನಿಯ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಸಾಫ್ಟ್‌ವೇರ್ ವಹಿವಾಟು ಸಾಮಾನ್ಯ ಸ್ಥಿತಿಗೆ ಬಂದಿರುವುದರಿಂದ,ಸಿಬ್ಬಂದಿಗಳ ವೇತನದಲ್ಲಿ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಇನ್ಫೋಸಿಸ್ ವಕ್ತಾರರು ತಿಳಿಸಿದ್ದಾರೆ.

ಸಾಫ್ಟ್‌ವೇರ್ ವಹಿವಾಟಿನಲ್ಲಿ ಪ್ರಮುಖ ರಾಷ್ಟ್ರವಾದ ಅಮೆರಿಕ ಆರ್ಥಿಕತೆಯಲ್ಲಿ ಕುಸಿತ ಕಂಡಿದ್ದರಿಂದ, ಕಳೆದ ವರ್ಷ ವಹಿವಾಟು ತುಂಬಾ ಕುಸಿತ ಕಂಡಿತ್ತು. 2009ರ ಏಪ್ರಿಲ್ ತಿಂಗಳ ಅವಧಿಯಲ್ಲಿ ಸಿಬ್ಬಂದಿಗಳಿಗೆ ಬಡ್ತಿ ನೀಡಿ, ಅಕ್ಟೋಬರ್ ತಿಂಗಳ ಅವಧಿಯಲ್ಲಿ ವೇತನ ಹೆಚ್ಚಳ ಮಾಡಲಾಗಿತ್ತು ಎಂದು ವಕ್ತಾರರು ವಿವರಣೆ ನೀಡಿದ್ದಾರೆ.

ಇನ್ಫೋಸಿಸ್ ಸಂಸ್ಥೆ ಸಿಬ್ಬಂದಿಗಳ ವೇತನದಲ್ಲಿ ಹೆಚ್ಚಳ ಮಾಡುವ ನಿರ್ಧಾರದಿಂದ, ಬೃಹತ್ ಖಾಸಗಿ ಕ್ಷೇತ್ರದ ಸಿಬ್ಬಂದಿಗಳು ಒಂದು ಲಕ್ಷಕ್ಕಿಂತ ಹೆಚ್ಚಿನ ವೇತನ ಪಡೆಯಲು ಸಾಧ್ಯವಾಗುತ್ತಿದೆ ಎಂದು ಮಾನವ ಸಂಪನ್ಮೂಲ ವಿಭಾಗದ ಅದಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಇನ್ಫೋಸಿಸ್, ಐಟಿ, ವೇತನ ಹೆಚ್ಚಳ