ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ (Rupee | US dollar | Asian currencies | Market| Forex)
Bookmark and Share Feedback Print
 
ಏಷ್ಯಾ ಮಾರುಕಟ್ಟೆಗಳ ಸ್ಥಿರವಹಿವಾಟಿನಿಂದಾಗಿ, ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 5 ಪೈಸೆ ಚೇತರಿಕೆ ಕಂಡಿದ್ದು, 45.77 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 19 ಪೈಸೆ ಏರಿಕೆ ಕಂಡು 45.82/83 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ 5 ಪೈಸೆ ಏರಿಕೆ ಕಂಡು 45.77 ರೂಪಾಯಿಗಳಿಗೆ ತಲುಪಿದೆ.

ಅಮುದು ವಹಿವಾಟುದಾರರು ಹಾಗೂ ಬ್ಯಾಂಕ್‌ಗಳು ಡಾಲರ್‌ಗಳ ಮಾರಾಟದಲ್ಲಿ ತೊಡಗಿದ್ದರಿಂದ, ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳ ಕೂಡಾ ರೂಪಾಯಿ ಚೇತರಿಕೆಗೆ ಬೆಂಬಲ ನೀಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 24.95 ಪಾಯಿಂಟ್‌ಗಳ ಏರಿಕೆ ಕಂಡು,17,024.96 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ