ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯದಲ್ಲಿ ಚೇತರಿಕೆ (Rupee|Forex|Dollar)
Bookmark and Share Feedback Print
 
ವಿದೇಶಿ ಬಂಡವಾಳದ ಒಳಹರಿವು ಹಾಗೂ ಏಷ್ಯಾ ಕರೆನ್ಸಿ‌ಗಳ ಮೌಲ್ಯದಲ್ಲಿ ಚೇತರಿಕೆಯಾಗಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 4 ಪೈಸೆ ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಅಂತ್ಯಕ್ಕೆ 1ಪೈಸೆ ಏರಿಕೆ ಕಂಡು 45.81/82 ರೂಪಾಯಿಗಳಿಗೆ ಮುಕ್ತಾಯವಾಗಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ 4ಪೈಸೆ ಏರಿಕೆ ಕಂಡು 45.77ರೂಪಾಯಿಗಳಿಗೆ ತಲುಪಿದೆ.

ವಿದೇಶಿ ಬಂಡವಾಳದ ಒಳಹರಿವು ಹಾಗೂ ಏಷ್ಯಾ ಮೌಲ್ಯಗಳ ಸ್ಥಿರತೆಯಿಂದಾಗಿ ಡಾಲರ್ ಎದುರಿಗೆ ರೂಪಾಯಿ ಚೇತರಿಸಿಕೊಂಡಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇರುಪೇಟೆ ಸೂಚ್ಯಂಕ 124 ಪಾಯಿಂಟ್‌ಗಳ ಏರಿಕೆ ಕಂಡು 17,095.89 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ