ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಶೇ.9ರ ಜಿಡಿಪಿ ಬಜೆಟ್ ಮಂಡನೆಯ ಗುರಿ:ಪ್ರಣಬ್ (Pranab Mukherjee | Union Budget | Interview)
Bookmark and Share Feedback Print
 
ದೇಶದ ಆರ್ಥಿಕ ವೃದ್ಧಿ ದರವನ್ನು ಶೇ.9ಕ್ಕೆ ತಲುಪಿಸುವ ಗುರಿಯನ್ನು ತಲುಪುವ ನಿಟ್ಟಿನಲ್ಲಿ, ಪ್ರಸಕ್ತ ಬಜೆಟ್ ಮಂಡಿಸಲಾಗಿದೆ ಎಂದು ಕೇಂದ್ರ ವಿತ್ತಖಾತೆ ಸಚಿವ ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ಬಜೆಟ್ ಮಂಡನೆಯ ನಂತರ ಮಾಧ್ಯಮಗಳ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ಮುಖರ್ಜಿ,ಬಜೆಟ್ ಮಂಡಿಸುವಾಗ ಶೇ.9ರ ಜಿಡಿಪಿ ಶೀಘ್ರದಲ್ಲಿ ಮರಳುವಿಕೆ, ಆರ್ಥಿಕ ಕ್ರೂಢೀಕರಣೆ ಮತ್ತು ಅಭಿವೃದ್ಧಿ ಸೇರಿದಂತೆ, ಮೂರು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಯುಪಿಎ ಸರಕಾರ ದೇಶದ ಆರ್ಥಿಕತೆಯನ್ನು ವೇಗವಾಗಿ ಚೇತರಿಸಿಕೊಳ್ಳಲು ಹಲವಾರು ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದ್ದು, ಅಹಾರ ದರಗಳ ಏರಿಕೆ ನಿಯಂತ್ರಣಕ್ಕೆ ಸರಕಾರ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದೆ ಎಂದು ಮುಖರ್ಜಿ ಹೇಳಿದ್ದಾರೆ.

ದರ ಏರಿಕೆಯಿಂದ ಜನಸಾಮಾನ್ಯರು ಕಳವಳ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ, ಕಷ್ಟದ ಸಮಯದಲ್ಲಿ ಕಠಿಣ ನಿರ್ಧಾರ ತೆಗೆದುಕೊಂಡಿದ್ದೇನೆ. ಭಾರತ ಕೇವಲ ವಿಶಾಲವಾದ ವಿಚಾರ ಮಾಡುವುದಿಲ್ಲ. ವಿಶಾಲವಾದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಮಾಧ್ಯಮಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ವಿತ್ತ ಸಚಿವ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ