ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ (Dollar | Rupee gains| Forex | Market)
Bookmark and Share Feedback Print
 
ಏಷ್ಯಾ ಮಾರುಕಟ್ಟೆಗಳ ಸ್ಥಿರ ವಹಿವಾಟಿನಿಂದಾಗಿ ಡಾಲರ್ ಎದುರಿಗೆ, ರೂಪಾಯಿ ಮೌಲ್ಯದಲ್ಲಿ 14 ಪೈಸೆ ಏರಿಕೆಯಾಗಿ 45.46 ರೂಪಾಯಿಗಳಿಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ, 21ಪೈಸೆ ಏರಿಕೆ ಕಂಡು 45.60/61ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಕೂಡಾ, 14 ಪೈಸೆ ಏರಿಕೆ ಕಂಡು 45.46 ರೂಪಾಯಿಗಳಿಗೆ ತಲುಪಿದೆ.

ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳ ಹಾಗೂ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತದ ಹಿನ್ನೆಲೆಯಲ್ಲಿ, ರೂಪಾಯಿ ಮೌಲ್ಯ ಚೇತರಿಕೆಗೆ ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ, 193 ಪಾಯಿಂಟ್‌ಗಳ ಏರಿಕೆ ಕಂಡು 17,187.55 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ