ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಪ್ರಯಾಣಿಕ ಕಾರುಗಳ ಮಾರಾಟದಲ್ಲಿ ಶೇ.33ರಷ್ಟು ಹೆಚ್ಚಳ (Domestic car sales jump|bikes 31 per cent jump|Cars 33 per cent)
Bookmark and Share Feedback Print
 
ದೇಶಿಯ ಪ್ರಯಾಣಿಕ ಕಾರುಗಳ ಮಾರಾಟದಲ್ಲಿ ಶೇ.33.20ರಷ್ಟು ಹೆಚ್ಚಳವಾಗಿದ್ದು, 153.845 ಕಾರುಗಳನ್ನು ಮಾರಾಟ ಮಾಡಲಾಗಿದೆ ಎಂದು ವಹಿವಾಟಿನ ಮೂಲಗಳು ತಿಳಿಸಿವೆ.

ಸೂಸೈಟಿ ಆಫ್ ಇಂಡಿಯನ್ ಅಟೋಮೊಬೈಲ್ ಮ್ಯಾನುಫ್ಯಾಕ್ಚುರರ್ಸ್‌ ಮೂಲಗಳ ಪ್ರಕಾರ, ಫೆಬ್ರವರಿ ತಿಂಗಳ ಅವಧಿಯಲ್ಲಿ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.30.72ರಷ್ಟು ಏರಿಕೆಯಾಗಿದ್ದು,6,42419 ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಲಾಗಿದೆ. ಕಳೆದ ವರ್ಷದ ಫೆಬ್ರವರಿ ತಿಂಗಳ ಅವಧಿಯಲ್ಲಿ 4,91,451 ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಲಾಗಿತ್ತು.

2010ರ ಜನೆವರಿ ತಿಂಗಳ ಅವಧಿಯಲ್ಲಿ 6,30,838 ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಲಾಗಿತ್ತು. ಫೆಬ್ರವರಿ ತಿಂಗಳ ಅವಧಿಯಲ್ಲಿ ವಾಹನಗಳ ಮಾರಾಟದಲ್ಲಿ ಶೇ.32.78ರಷ್ಟು ಏರಿಕೆಯಾಗಿ, 8,37,653 ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಲಾಗಿದೆ.

ವಾಣಿಜ್ಯ ವಾಹನಗಳ ಮಾರಾಟದಲ್ಲಿ ಶೇ.87.11ರಷ್ಟು ಏರಿಕೆಯಾಗಿದ್ದು,58,024 ವಾಹನಗಳನ್ನು ಮಾರಾಟ ಮಾಡಲಾಗಿದೆ. ಕಳೆದ ವರಷದ ಫೆಬ್ರವರಿ ತಿಂಗಳ ಅವಧಿಯಲ್ಲಿ 31,011 ವಾಹನಗಳನ್ನು ಮಾರಾಟ ಮಾಡಲಾಗಿತ್ತು.

ಒಟ್ಟು ವಾಣಿಜ್ಯ ವಾಹನಗಳ ಮಾರಾಟದಲ್ಲಿ ಫೆಬ್ರವರಿ ತಿಂಗಳ ಅವಧಿಯಲ್ಲಿ, ಶೇ.34.98ರಷ್ಟು ಏರಿಕೆಯಾಗಿದ್ದು,11,29,783 ವಾಹನಗಳನ್ನು ಮಾರಾಟ ಮಾಡಲಾಗಿದೆ.ಕಳೆದ ವರ್ಷದ ಫೆಬ್ರವರಿ ತಿಂಗಳ ಅವಧಿಯಲ್ಲಿ 8,37,017 ವಾಹನಗಳನ್ನು ಮಾರಾಟ ಮಾಡಲಾಗಿತ್ತು ಎಂದು ಸೂಸೈಟಿ ಆಫ್ ಇಂಡಿಯನ್ ಅಟೋಮೊಬೈಲ್ ಮ್ಯಾನುಫ್ಯಾಕ್ಚುರರ್ಸ್‌ ಅಸೋಸಿಯೇಶನ್ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ