ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ರೂಪಾಯಿ ಮೌಲ್ಯ ಬಲವರ್ಧನೆ (Rupee | Dollar | Asian currencies | Forex| Market)
Bookmark and Share Feedback Print
 
ಏಷ್ಯಾ ಮಾರುಕಟ್ಟೆಗಳ ಸ್ಥಿರ ವಹಿವಾಟು ಹಾಗೂ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ 17 ಪೈಸೆ ಏರಿಕೆ ಕಂಡು 45.44 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ 23 ಪೈಸೆ ಏರಿಕೆ ಕಂಡು 45.61/62ರೂಪಾಯಿಗಳಿಗೆ ತಲುಪಿತ್ತು.ಇಂದಿನ ಆರಂಭಿಕ ವಹಿವಾಟಿನಲ್ಲಿ 17 ಪೈಸೆ ಏರಿಕೆ ಕಂಡು 45.44 ರೂಪಾಯಿಗಳಿಗೆ ತಲುಪಿದೆ.

ಏಷ್ಯಾ ಮಾರುಕಟ್ಟೆಗಳ ವಹಿವಾಟು ಚೇತರಿಕೆ ಹಾಗೂ ರಫ್ತು ವಹಿವಾಟುದಾರರು ಮತ್ತು ಬ್ಯಾಂಕ್‌ಗಳಿಂದ ಡಾಲರ್‌ಗಳ ಮಾರಾಟದಲ್ಲಿ ಹೆಚ್ಚಳವಾಗಿದ್ದರಿಂದ ರೂಪಾಯಿ ಮೌಲ್ಯದ ಚೇತರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವಿನ ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಏರಿಕೆಯಾಗಲು ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 77 ಪಾಯಿಂಟ್‌ಗಳ ಏರಿಕೆ ಕಂಡು 17,244.54 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ