ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಬ್ಯಾಂಕ್‌ ಆಫ್ ಇಂಡಿಯಾದ ಠೇವಣಿ ಬಡ್ಡಿದರ ಹೆಚ್ಚಳ (Bank of India | Low interest | FD rates | ICICI Bank | HDFC Bank)
Bookmark and Share Feedback Print
 
ಸರಕಾರಿ ಸ್ವಾಮ್ಯದ ಬ್ಯಾಂಕ್‌ ಆಫ್ ಇಂಡಿಯಾ, ಠೇವಣಿ ಬಡ್ಡಿ ದರಗಳಲ್ಲಿ 50 ಬೇಸಿಸ್ ಪಾಯಿಂಟ್‌ಗಳನ್ನಏರಿಕೆಗೊಳಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ.

ಬ್ಯಾಂಕ್ ಆಫ್ ಇಂಡಿಯಾ ಒಂಬತ್ತು ತಿಂಗಳ ಅವಧಿಯಿಂದ 364 ದಿನಗಳವರೆಗೆ, ಇಲ್ಲಿಯವರೆಗೆ ಶೇ.6.5ರಷ್ಟು ಠೇವಣಿ ಬಡ್ಡಿದರವನ್ನು ನೀಡಲಾಗುತ್ತಿತ್ತು. ಇದೀಗ ಠೇವಣಿ ಬಡ್ಡಿ ದರದಲ್ಲಿ 50 ಬೇಸಿಸ್ ಪಾಯಿಂಟ್‌ಗಳಷ್ಟು ಏರಿಕೆ ಘೋಷಿಸಿದೆ.

ಮೂರು ವರ್ಷಗಳು ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಠೇವಣಿ ಬಡ್ಡಿದರವನ್ನು ಶೇ.7ಕ್ಕೆ ಹೆಚ್ಚಳಗೊಳಿಸಿದೆ ಎಂದು ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ದೇಶದ ಖಾಸಗಿ ಕ್ಷೇತ್ರದ ಬ್ಯಾಂಕ್‌ಗಳಾದ ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್‌ಗಳು ಬಡ್ಡಿದರಗಳಲ್ಲಿ ಹೆಚ್ಚಳ ಘೋಷಿಸಿದ ನಂತರ, ಬ್ಯಾಂಕ್‌ ಆಫ್ ಇಂಡಿಯಾ ಕೂಡಾ, ಬಡ್ಡಿ ದರದಲ್ಲಿ ಹೆಚ್ಚಳಗೊಳಿಸಿದೆ ಎಂದು ಬ್ಯಾಂಕ್‌ನ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ