ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ರೂಪಾಯಿ ಮೌಲ್ಯದಲ್ಲಿ 13ಪೈಸೆ ಕುಸಿತ (Dollar||Rupee| US currency | Forex)
Bookmark and Share Feedback Print
 
ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್‌ ಮೌಲ್ಯದ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ 13 ಪೈಸೆ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿದೇಶಿ ಬಂಡವಾಳ ಹೂಡಿಕೆಯ ಹೊರಹರಿವು ಹೆಚ್ಚಳವಾಗಿರುವುದು ಕೂಡಾ ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ 18 ಪೈಸೆ ಕುಸಿತ ಕಂಡು 45.43/44 ರೂಪಾಯಿಗಳಿಗೆ ತಲುಪಿತ್ತು.ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ 13 ಪೈಸೆ ಕುಸಿತ ಕಂಡು 45.56 ರೂಪಾಯಿಗಳಿಗೆ ತಲುಪಿದೆ.

ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳ ಹಾಗೂ ಸಾಗರೋತ್ತರ ಮಾರುಕಟ್ಟೆಯಲ್ಲಿ ಡಾಲರ್ ವಹಿವಾಟು ಚೇತರಿಕೆಯಿಂದಾಗಿ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 77.67 ಪಾಯಿಂಟ್‌ಗಳ ಕುಸಿತ ಕಂಡು 17,088.95 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ