ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ದೇಶದ ಪ್ರತಿಯೊಂದು ಗ್ರಾಮಕ್ಕೆ ಬ್ಯಾಂಕಿಂಗ್‌ ಸೇವೆ:ಆರ್‌ಬಿಐ (Banking services | RBI | Villages | Union Bank of India)
Bookmark and Share Feedback Print
 
ಮುಂಬರುವ 2015ರ ವೇಳೆಗೆ ದೇಶದ ಎಲ್ಲಾ ಗ್ರಾಮಗಳು ಬ್ಯಾಂಕಿಂಗ್‌ ಸೇವೆಗಳನ್ನು ಪಡೆಯಲಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಉಪಗೌವರ್ನರ್ ಹೇಳಿದ್ದಾರೆ.

ಗ್ರಾಮಗಳ ಜನತೆಗೆ ಬೈಯೋಮೆಟ್ರಿಕ್ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಲು ಆಗಮಿಸಿದ ಚಕ್ರವರ್ತಿ ಮಾತನಾಡಿ, ಬ್ಯಾಂಕ್‌ಗಳು ರಾಷ್ಟ್ರೀಯಕರಣಗೊಂಡ 40 ವರ್ಷಗಳ ನಂತರವೂ ದೇಶದ ಶೇ.50ರಷ್ಟು ಜನತೆಗೆ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಲು ಸಾಧ್ಯವಾಗದಿರುವುದಕ್ಕೆ ವಿಷಾದ ವ್ಯಕ್ತಪಡಿಸಿದರು.

ಗ್ರಾಮೀಣ ಭಾಗದ ಜನತೆಯ ಸಂಕಷ್ಟಗಳನ್ನು ಪರಿಹರಿಸಲು ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಂಡು, ಮುಂಬರುವ 2015ರೊಳಗೆ ದೇಶದ ಪ್ರತಿಯೊಂದು ಗ್ರಾಮಕ್ಕೆ ಬ್ಯಾಂಕಿಂಗ್ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್, 2000 ಜನಸಂಖ್ಯೆಗಿಂತ ಹೆಚ್ಚಳ ಜನಸಾಂದ್ರತೆಯನ್ನು ಹೊಂದಿರುವ ಗ್ರಾಹಕರಿಗೆ 2012ರೊಳಗೆ ಮೊದಲ ಹಂತದಲ್ಲಿ ಬ್ಯಾಂಕಿಂಗ್ ಸೌಲಭ್ಯ ಒದಗಿಸಲಾಗುವುದು.ಮುಂಬರುವ 2015ರ ವೇಳೆಗೆ ಉಳಿದ ಗ್ರಾಮಗಳಿಗೆ ಬ್ಯಾಂಕ್‌ ಸೌಲಭ್ಯ ಒದಗಿಸಲಾಗುವುದು ಎಂದರು.

ಯುನಿಯನ್ ಬ್ಯಾಂಕ್‌ ಆಫ್ ಇಂಡಿಯಾ ಶಾಖೆಗಳಿರದ 2500 ಗ್ರಾಮಗಳಲ್ಲಿ 2.1 ಮಿಲಿಯನ್ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಿದ ಏಕೈಕ ಬ್ಯಾಂಕ್‌ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿರುವುದಕ್ಕೆ ಚಕ್ರವರ್ತಿ ಸಂತಸ ವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ