ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಟಾಟಾ ವಾಹನಗಳ ಮಾರಾಟದಲ್ಲಿ ಶೇ.59ರಷ್ಟು ಏರಿಕೆ (Tata Motors | Auto major | Jaguar Land Rover | Global sales)
Bookmark and Share Feedback Print
 
ಪ್ರಯಾಣಿಕ ಹಾಗೂ ವಾಣಿಜ್ಯ ವಾಹನಗಳ ಮಾರಾಟ ಫೆಬ್ರವರಿ ತಿಂಗಳ ಅವಧಿಯಲ್ಲಿ ಶೇ.59ರಷ್ಟು ಚೇತರಿಕೆಯಾಗಿ,89,768ವಾಹನಗಳನ್ನು ಮಾರಾಟ ಮಾಡಲಾಗಿದೆ ಎಂದು ದೇಶದ ಖ್ಯಾತ ವಾಹನೋದ್ಯಮ ತಯಾರಿಕೆ ಸಂಸ್ಥೆ ಟಾಟಾ ಮೋಟಾರ್ಸ್ ಮೂಲಗಳು ತಿಳಿಸಿವೆ.

ಫೆಬ್ರವರಿ ತಿಂಗಳ ಅವಧಿಯಲ್ಲಿ ಜಾಗ್ವಾರ್ ಮತ್ತು ಲ್ಯಾಂಡ್ ರೋವರ್ ಮಾಡೆಲ್‌ ಕಾರುಗಳ ಮಾರಾಟದಲ್ಲಿ ಶೇ.60ರಷ್ಟು ಏರಿಕೆಯಾಗಿ 17,197 ವಾಹನಗಳನ್ನು ಮಾರಾಟ ಮಾಡಲಾಗಿದೆ ಎಂದು ಕಂಪೆನಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ವರ್ಷದ ಫೆಬ್ರವರಿ ತಿಂಗಳಿಗೆ ಹೋಲಿಸಿದಲ್ಲಿ, ಪ್ರಸಕ್ತ ವರ್ಷದಲ್ಲಿ ಪ್ರಯಾಣಿಕ ವಾಹನಗಳ ಮಾರಾಟದಲ್ಲಿ ಶೇ.50 ರಷ್ಟು ಏರಿಕೆಯಾಗಿ 47,108 ವಾಹನಗಳನ್ನು ಮಾರಾಟ ಮಾಡಲಾಗಿದೆ.

ವಾಣಿಜ್ಯ ವಾಹನಗಳ ಮಾರಾಟದಲ್ಲಿ ಕೂಡಾ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಶೇ.70ರಷ್ಟು ಏರಿಕೆಯಾಗಿ, 42,660 ವಾಹನಗಳನ್ನು ಮಾರಾಟ ಮಾಡಲಾಗಿದೆ.

ಪ್ರಸಕ್ತ ವರ್ಷದ ಏಪ್ರಿಲ್‌2009ರಿಂದ ಫೆಬ್ರವರಿ 2010ರವರೆಗಿನ ಅವಧಿಯಲ್ಲಿ ಒಟ್ಟು ವಾಹನಗಳ ಮಾರಾಟದಲ್ಲಿ ಶೇ.17ರಷ್ಟು ಏರಿಕೆಯಾಗಿದ್ದು, 771,238 ವಾಹನಗಳನ್ನು ಮಾರಾಟ ಮಾಡಲಾಗಿದೆ ಎಂದು ಟಾಟಾ ಮೋಟಾರ್ಸ್ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ