ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಿಯೆಟ್‌ನಿಂದ ನೂತನ ಮಾಡೆಲ್ ಕಾರು ಮಾರುಕಟ್ಟೆಗೆ (Punto|Rajeev kapoor|Fiat India)
Bookmark and Share Feedback Print
 
ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ವಾಹನಗಳ ಮಾರಾಟದಲ್ಲಿ ದ್ವಿಗುಣವಾಗುವ ನಿರೀಕ್ಷೆಯಿದೆ ಎಂದು ವಾಹನೋದ್ಯಮ ತಯಾರಿಕೆ ಸಂಸ್ಥೆಯಾದ ಫಿಯೆಟ್ ಇಂಡಿಯಾ ಮೂಲಗಳು ತಿಳಿಸಿವೆ.

2008-09ರ ಆರ್ಥಿಕ ಸಾಲಿನಲ್ಲಿ 24,000 ವಾಹನಗಳನ್ನು ಮಾರಾಟ ಮಾಡಲಾಗಿತ್ತು.ಪ್ರಸಕ್ತ ವರ್ಷದ ಅವಧಿಯಲ್ಲಿ 50,000 ವಾಹನಗಳ ಮಾರಾಟವಾಗುವ ಸಾಧ್ಯತೆಗಳಿವೆ ಎಂದು ಕಂಪೆನಿಯ ವಕ್ತಾರರು ತಿಳಿಸಿದ್ದಾರೆ.

ಭಾರತದಲ್ಲಿ ಫಿಯೆಟ್ ಕಾರುಗಳನ್ನು ಖರೀದಿಸುವ ಗ್ರಾಹಕರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದರಿಂದ, ಇಂತಹ ಅವಕಾಶಗಳನ್ನು ಬಳಸಿಕೊಳ್ಳುವುದು ಅಗತ್ಯವಾಗಿದೆ.ಪ್ರಸಕ್ತ ವರ್ಷದ ಡಿಸೆಂಬರ್‌ ವೇಳೆಗೆ ಅಂದಾಜು 50,000 ವಾಹನಗಳನ್ನು ಮಾರಾಟವಾಗುವ ನಿರೀಕ್ಷೆಯಿದೆ ಎಂದು ಫಿಯೆಟ್ ಇಂಡಿಯಾ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜೀವ್ ಕಪೂರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಫಿಯೆಟ್ ಕಂಪೆನಿ ಇಂದು 1.2 ಲೀಟರ್‌ನ ಪುಂಟೊ ಫೈರ್ ಡೈನಮಿಕ್ ಆಂಡ್ ಎಮೊಶನ್ ಮಾಡೆಲ್ ಕಾರುಗಳಿಗೆ 4.57 ಲಕ್ಷ ಹಾಗೂ 4.87ಲಕ್ಷ ರೂಪಾಯಿಗಳ ದರವನ್ನು ನಿಗದಿಪಡಿಸಲಾಗಿದೆ ಎಂದು ಕಪೂರ್ ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ