ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » 1 ಸಾವಿರ ಶಾಖೆಗಳ ಆರಂಭಕ್ಕೆ ನಿರ್ಧಾರ:ಎಸ್‌ಬಿಐ (State Bank of India | Rural | Semi-urban | Branches | SBI)
Bookmark and Share Feedback Print
 
ದೇಶದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ, ಮುಂಬರುವ 2011ರ ವೇಳೆಗೆ ಗ್ರಾಮೀಣ ಮತ್ತು ಅರೆಪಟ್ಟಣಗಳಲ್ಲಿ 1000 ಶಾಖೆಗಳನ್ನು ಆರಂಭಿಸಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಸಕ್ತ ವರ್ಷದ ಆರ್ಥಿಕ ಸಾಲಿನಲ್ಲಿ ಗ್ರಾಮೀಣ ಮತ್ತು ಅರೆ-ಪಟ್ಟಣ ಪ್ರದೇಶಗಳಲ್ಲಿ 600 ಶಾಖೆಗಳನ್ನು ಆರಂಭಿಸಲಾಗುತ್ತಿದ್ದು, ದೇಶದ 8 ಸಾವಿರ ಗ್ರಾಮೀಣ ಮತ್ತು ಅರೆಪಟ್ಟಣಗಳಲ್ಲಿ ಬ್ಯಾಂಕ್ ಕಾರ್ಯನಿರ್ವಹಿಸುತ್ತಿದೆ ಎಂದು ಎಸ್‌ಬಿಐನ ಬ್ಯಾಂಕ್‌ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಜೆ.ಕೆ.ಸಿನ್ಹಾ ತಿಳಿಸಿದ್ದಾರೆ.

ಗ್ರಾಮೀಣ ಮತ್ತು ಅರೆ ಪಟ್ಟಣಗಳ ಜನತೆಯ ಸೌಲಭ್ಯಕ್ಕಾಗಿ, 24 ಸಾವಿರ ಸ್ಮಾರ್ಟ್ ಕಾರ್ಡ್‌‌ಗಳನ್ನು ವಿತರಿಸಲಾಗುತ್ತಿದೆ ಎಂದು ಸಿನ್ಹಾ ವಿವರಣೆ ನೀಡಿದ್ದಾರೆ.

ಅದನ್ನು ಹೊರತುಪಡಿಸಿ ಎಸ್‌ಬಿಐ ಬ್ಯಾಂಕ್, ಗ್ರಾಹಕರಿಗೆ ಹೆಚ್ಚಿನ ಸೇವಾ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ, 3ಐ ಇನ್ಫೋಟೆಕ್ ಫೌಂಡೇಶನ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ಮುಖ್ಯ ಪ್ರಧಾನ ವ್ಯವಸ್ಥಾಪಕ ಜೆ.ಕೆ.ಸಿನ್ಹಾ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ