ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಎಸ್‌ಬಿಐಯಿಂದ ಸರಕಾರಿ ಬ್ಯಾಂಕ್‌ಗಳ ಸ್ವಾಧೀನವಿಲ್ಲ (State Bank Of India | State Bank of Indore | Government)
Bookmark and Share Feedback Print
 
ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದಿಂದ ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳನ್ನು ಖರೀದಿಸುವ ಯಾವುದೇ ಪ್ರಸ್ತಾವನೆಯಿಲ್ಲ ಎಂದು ಕೇಂದ್ರದ ವಿತ್ತಖಾತೆ ರಾಜ್ಯ ಸಚಿವರು ತಿಳಿಸಿದ್ದಾರೆ.

ಯಾವುದೇ ರಾಷ್ಟ್ರೀಕೃತ ಬ್ಯಾಂಕ್‌ಗಳನ್ನು, ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದೊಂದಿಗೆ ವಿಲೀನಗೊಳಿಸುವ ಪ್ರಸ್ತಾವನೆ ಸದ್ಯಕ್ಕಿಲ್ಲ ಎಂದು ವಿತ್ತಖಾತೆ ರಾಜ್ಯ ಸಚಿವ ನಮೋ ನರೈನ್ ಮೀನಾ ಸಂಸತ್ತಿಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕ್‌ಗಳು ವಿಲೀನವಾಗುವಂತೆ ಒತ್ತಡ ಹೇರುವುದಿಲ್ಲ. ಆದರೆ ಬ್ಯಾಂಕ್‌ಗಳ ಅಡಳಿತ ಮಂಡಳಿಗಳು ಒಂದು ವೇಳೆ ವಿಲೀನದ ಪ್ರಸ್ತಾವನೆ ಸಲ್ಲಿಸಿದಲ್ಲಿ ಸರಕಾರ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಹ ಬ್ಯಾಂಕ್‌ಗಳಾದ ಆರು ಬ್ಯಾಂಕ್‌ಗಳನ್ನು ವಿಲೀನಗೊಳಿಸುವ ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಆದರೆ ಕಾರ್ಮಿಕ ಸಂಘಟನೆಗಳ ಹಾಗೂ ರಾಜಕೀಯ ವಿರೋಧದಿಂದಾಗಿ ವಿಲೀನ ಪ್ರಕ್ರಿಯೆ ಕೈಬಿಟ್ಟಿದೆ ಎಂದು ಸಚಿವ ನಮೋನರೈನ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ