ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಮೌಲ್ಯದಲ್ಲಿ ಕುಸಿತ (Rupee|Forex|Dollar)
Bookmark and Share Feedback Print
 
ದೇಶಿಯ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 15 ಪೈಸೆ ಏರಿಕೆಯಾಗಿ 45.43 ಡಾಲರ್‌ಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 15 ಪೈಸೆ ಕುಸಿತ ಕಂಡು 45.58/59 ರೂಪಾಯಿಗಳಿಗೆ ತಲುಪಿತ್ತು.

ಬ್ಯಾಂಕ್‌ಗಳು ಹಾಗೂ ಅಮುದು ವಹಿವಾಟುದಾರರಿಂದ ಡಾಲರ್ ಮಾರಾಟದಲ್ಲಿ ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಹೆಚ್ಚಳವಾಗಲು ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಅದನ್ನು ಹೊರತುಪಡಿಸಿ, ವಿದೇಶಿ ಬಂಡವಾಳದ ಒಳಹರಿವು ಕೂಡಾ ಹೆಚ್ಚಳವಾಗಿರುವುದು ಕೂಡಾ ರೂಪಾಯಿ ಮೌಲ್ಯ ಏರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 118.48 ಪಾಯಿಂಟ್‌ಗಳಿಗೆ ಏರಿಕೆ ಕಂಡು 17,501.66 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ ಫಾರೆಕ್ಸ್, ಡಾಲರ್