ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ರೂಪಾಯಿ ಮೌಲ್ಯದಲ್ಲಿ 9 ಪೈಸೆ ಕುಸಿತ (Rupee| Dollar | Forex | Market)
Bookmark and Share Feedback Print
 
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯ ಚೇತರಿಕೆಯಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 9 ಪೈಸೆ ಕುಸಿತ ಕಂಡು 45.43 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 24 ಪೈಸೆ ಏರಿಕೆ ಕಂಡು 45.34/35ರೂಪಾಯಿಗಳಿಗೆ ತಲುಪಿತ್ತು.ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ 9 ಪೈಸೆ ಕುಸಿತ ಕಂಡು 45.43 ರೂಪಾಯಿಗಳಿಗೆ ತಲುಪಿದೆ.

ಅಮುದುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳ ಹಾಗೂ ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 53.99 ಪಾಯಿಂಟ್‌ಗಳಿಗೆ ಏರಿಕೆ ಕಂಡು 17,544.07 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ