ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ 90 ಬಿನ್‌ ರೂ.ಹೂಡಿಕೆ (State-run banks | Financial Services | Inject)
Bookmark and Share Feedback Print
 
ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಬಂಡವಾಳಕ್ಕೆ ಚೇತರಿಕೆ ನೀಡಲು ಕೇಂದ್ರ ಸರಕಾರ ಬ್ಯಾಂಕ್‌ಗಳಲ್ಲಿ 90 ಬಿಲಿಯನ್ ರೂಪಾಯಿಗಳನ್ನು ಹೂಡಿಕೆ ಮಾಡಲು ನಿರ್ಧರಿಸಿದೆ ಎಂದು ವಿತ್ತ ಸಚಿವಾಲಯದ ಕಾರ್ಯದರ್ಶಿ ಆರ್.ಗೋಪಾಲನ್ ಹೇಳಿದ್ದಾರೆ.

ಮುಂಬರುವ ಏಪ್ರಿಲ್-ಮೇ ತಿಂಗಳ ಅವಧಿಯಲ್ಲಿ ಹಣವನ್ನು ಬ್ಯಾಂಕ್‌ಗಳಿಗೆ ವಿತರಿಸಲಾಗುವುದು ಎಂದು ಆರ್.ಗೋಪಾಲನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರಗಳಲ್ಲಿ ಏರಿಕೆ ಮಾಡುವ ಸಾಧ್ಯತೆಗಳಿರುವುದರಿಂದ, ಬ್ಯಾಂಕ್‌ಗಳಲ್ಲಿ ನಗದು ಹರಿವಿನ ಪ್ರಮಾಣದಲ್ಲಿ ಇಳಿಕೆಯಾಗುವ ಸಾಧ್ಯತೆಗಳಿವೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ