ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಏಪ್ರಿಲ್‌ನಲ್ಲಿ ಆರ್‌ಬಿಐನಿಂದ ಮತ್ತಷ್ಟು ರೆಪೋ ದರ ಹೆಚ್ಚಳ (RBI | Borrowing rates | Morgan Stanley | Analysts)
Bookmark and Share Feedback Print
 
ಭಾರತೀಯ ರಿಸರ್ವ್ ಬ್ಯಾಂಕ್ ಕಳೆದ ಶುಕ್ರವಾರದಂದು 25ಬಿಪಿಎಸ್ ರೆಪೋ ದರಗಳನ್ನು ಏರಿಕೆಗೊಳಿಸಿದ್ದು,ಮುಂದಿನ ತಿಂಗಳು ನಡೆಯಲಿರುವ ಆರ್ಥಿಕ ಪರಿಷ್ಕರಣ ಸಂದರ್ಭದಲ್ಲಿ ಮತ್ತಷ್ಟು ರೆಪೋ ದರಗಳಲ್ಲಿ ಹೆಚ್ಚಳಗೊಳಿಸುವ ಸಾಧ್ಯತೆಗಳಿವೆ ಎಂದು ಮೊರ್ಗಾನ್ ಸ್ಟೇನ್‌ಲೆ ಕಂಪೆನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮನೋಜ್ ಸ್ವಾಯಿನ್ ಹೇಳಿದ್ದಾರೆ.

ಅಹಾರ ದರಗಳ ಏರಿಕೆ ನಿಯಂತ್ರಣಕ್ಕಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವ ಆರ್‌ಬಿಐ, ಹಣದುಬ್ಬರ ಏರಿಕೆ ತಡೆಗಾಗಿ ಮಾರುಕಟ್ಟೆಯಲ್ಲಿ ನಗದು ಹಣದ ಪ್ರಭಾವವನ್ನು ಕಡಿಮೆಗೊಳಿಸಲು ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.

ಐಸಿಐಸಿಐ ಬ್ಯಾಂಕ್‌ನ ಆರ್ಥಿಕ ವಿಭಾಗದ ಅಧಿಕಾರಿ ಎ.ಪ್ರಸನ್ನಾ ಮಾತನಾಡಿ,ಮುಂದಿನ ತಿಂಗಳ ಅವಧಿಯಲ್ಲಿ ರಿಸರ್ವ್ ಬ್ಯಾಂಕ್ ರೆಪೋ ದರಗಳಲ್ಲಿ ಮತ್ತಷ್ಟು ಏರಿಕೆಗೊಳಿಸುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

ಫೆಬ್ರವರಿ ತಿಂಗಳಾಂತ್ಯಕ್ಕೆ ಸಗಟು ಸೂಚ್ಯಂಕ ಹಣದುಬ್ಬರ ದರ ಶೇ.9.89ಕ್ಕೆ ಏರಿಕೆ ಕಂಡಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ,
ಸಂಬಂಧಿತ ಮಾಹಿತಿ ಹುಡುಕಿ