ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ದೇಶದ ಜಿಡಿಪಿ ದರ ಶೇ.8.3ಕ್ಕೆ ತಲುಪಲಿದೆ:ವರದಿ (Inflation | Dun & Bradstreet | Economy | GDP)
Bookmark and Share Feedback Print
 
ಭಾರತದ ಆರ್ಥಿಕತೆ ಮುಂದಿನ ವರ್ಷದಲ್ಲಿ ಶೇ.8.3ಕ್ಕೆ ಚೇತರಿಕೆಯಾಗಲಿದೆ. ಆದರೆ ಹಣದುಬ್ಬರ ಕಳವಳ ನಿರಂತರವಾಗಿ ಮುಂದುವರಿಯಲಿದೆ ಎಂದು ಅಧ್ಯಯನ ಸಂಸ್ಥೆ ಡುನ್ ಆಂಡ್ ಬ್ರಾಡ್‌ಸ್ಟ್ರೀಟ್ ವರದಿಯಲ್ಲಿ ಬಹಿರಂಗಪಡಿಸಿದೆ.

ಹೂಡಿಕೆಯಲ್ಲಿ ಹೆಚ್ಚಳ ಹಾಗೂ ಬೇಡಿಕೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುಂದಿನ ವರ್ಷದ ಆರ್ಥಿಕ ಸಾಲಿನಲ್ಲಿ ಜಿಡಿಪಿ ದರ ಶೇ.8.3ಕ್ಕೆ ತಲುಪುವ ನಿರೀಕ್ಷೆಯಿದೆ ಎಂದು ಸಂಸ್ಥೆಯ ಮುಖ್ಯ ಆರ್ಥಿಕ ತಜ್ಞರಾದ ಯಾಶಿಕಾ ಸಿಂಗ್ ತಿಳಿಸಿದ್ದಾರೆ.

ಹಣದುಬ್ಬರ ಇಳಿಕೆ ಹಾಗೂ ಆರ್ಥಿಕ ವೃದ್ಧಿ ದರ ಚೇತರಿಕೆಗಾಗಿ ಸರಕಾರ ತೆಗೆದುಕೊಂಡ ಸೂಕ್ತ ಕ್ರಮಗಳಿಂದಾಗಿ, ಆರ್ಥಿಕತೆ ವೇಗವಾಗಿ ಸುಸ್ಥಿತಿಗೆ ಮರಳಲಿದೆ ಎಂದು ಹೇಳಿದ್ದಾರೆ.

ವಾರ್ಷಿಕ ಹಣದುಬ್ಬರ ದರ ಫೆಬ್ರವರಿ ತಿಂಗಳ ಅವಧಿಯಲ್ಲಿ ಶೇ.1.33ರಷ್ಟು ಏರಿಕೆ ಕಂಡು ಶೇ.9.89ಕ್ಕೆ ತಲುಪಿದೆ. ಆದರೆ ಭಾರತೀಯ ರಿಸರ್ವ್ ಬ್ಯಾಂಕ್ ಹಣದುಬ್ಬರ ದರ ಶೇ.8.5ಕ್ಕೆ ತಲುಪಲಿದೆ ಎಂದು ಸಮೀಕ್ಷಾ ವರದಿಯಲ್ಲಿ ಬಹಿರಂಗಪಡಿಸಿತ್ತು.
ಸಂಬಂಧಿತ ಮಾಹಿತಿ ಹುಡುಕಿ