ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ರೂಪಾಯಿ ಮೌಲ್ಯದಲ್ಲಿ 4 ಪೈಸೆ ಕುಸಿತ (Rupee|Dollar | Forex | market)
Bookmark and Share Feedback Print
 
ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆ ಹಾಗೂ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳದಿಂದಾಗಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 4 ಪೈಸೆ ಕುಸಿತವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ 5 ಪೈಸೆ ಕುಸಿತ ಕಂಡು 45.49/50 ರೂಪಾಯಿಗಳಿಗೆ ತಲುಪಿತ್ತು.ಇಂದಿನ ಆರಂಭಿಕ ವಹಿವಾಟಿನಲ್ಲಿ 4 ಪೈಸೆ ಕುಸಿತ ಕಂಡು 45.53 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳದಿಂದಾಗಿ ದುರ್ಬಲ ಮಾರುಕಟ್ಟೆಯ ವಹಿವಾಟು ಮತ್ತು ಆರ್‌ಬಿಐ ಘೋಷಿಸಿದ ಬಡ್ಡಿ ದರಗಳ ಏರಿಕೆಯಿಂದಾಗಿ, ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ,ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 240.85 ಪಾಯಿಂಟ್‌ಗಳ ಏರಿಕೆಯನ್ನು ಕಂಡು, 17,337.38 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ