ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಆರ್ಥಿಕ ವೃದ್ಧಿ ದರ ಶೇ.7.2ಕ್ಕೆ ತಲುಪಲಿದೆ:ಪ್ರಣಬ್ (Pranab Mukherjee | Economy | India | Growth)
Bookmark and Share Feedback Print
 
ದೇಶದ ಆರ್ಥಿಕ ವೃದ್ಧಿ ದರ ಶೇ.7.2ಕ್ಕೆ ವಿಸ್ತರಿಸುವ ನಿರೀಕ್ಷೆಯಿದ್ದು, ಮುಂದಿನ ಆರ್ಥಿಕ ವರ್ಷದಲ್ಲಿ ಶೇ.8.5ಕ್ಕೆ ತಲುಪುವ ಸಾಧ್ಯತೆಗಳಿವೆ ಎಂದು ವಿತ್ತಖಾತೆ ಸಚಿವ ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಆರ್ಥಿಕ ವೃದ್ಧಿ ದರ ಶೇ.7.2ಕ್ಕೆ ಏರಿಕೆ ಕಾಣಲಿದೆ. ಜಿಡಿಪಿ ದರ ಏರಿಕೆಗಾಗಿ ಕೇಂದ್ರ ಸರಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದ್ದು,ಜನಸಾಮಾನ್ಯರು ಆತಂಕಪಡುವ ಅಗತ್ಯವಿಲ್ಲ ಎಂದು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಚಿವ ಮುಖರ್ಜಿ ತಿಳಿಸಿದ್ದಾರೆ.

2010-11ರ ಅವಧಿಯಲ್ಲಿ ದೇಶದ ಆರ್ಥಿಕ ವೃದ್ಧಿ ದರ ಶೇ.8.5ಕ್ಕೆ ತಲುಪುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಜಾಗತಿಕ ಆರ್ಥಿಕ ಕುಸಿತದಿಂದ ನರಳುತ್ತಿದ್ದ ಕೈಗಾರಿಕೋದ್ಯಮ, ಇದೀಗ ಚೇತರಿಕೆ ಕಂಡು ಉತ್ತಮ ಬೆಳವಣಿಗೆ ಕಂಡಿವೆ. ಮುಂದಿನ ವರ್ಷದಲ್ಲಿ ಆರ್ಥಿಕತೆ ಸಾಮಾನ್ಯ ಸ್ಥಿತಿಗೆ ಮರಳುತ್ತದೆ ಎಂದು ವಿತ್ತಖಾತೆ ಸಚಿವ ಪ್ರಣಬ್ ಮುಖರ್ಜಿ ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ