ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ರೂಪಾಯಿ ಮೌಲ್ಯ ಬಲವರ್ಧನೆ (Dollar|Rupee|Forex |Market)
Bookmark and Share Feedback Print
 
ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದ ಮಧ್ಯೆಯು ಏಷ್ಯಾ ಕರೆನ್ಸಿಗಳ ಸ್ಥಿರ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 10 ಪೈಸೆ ಏರಿಕೆ ಕಂಡು 45.48 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 8 ಪೈಸೆ ಇಳಿಕೆ ಕಂಡು 45.58/59 ರೂಪಾಯಿಗಳಿಗೆ ತಲುಪಿತ್ತು.ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ 10 ಪೈಸೆ ಏರಿಕೆ ಕಂಡು 45.48 ರೂಪಾಯಿಗಳಿಗೆ ತಲುಪಿದೆ.

ಏಷ್ಯಾ ಕರೆನ್ಸಿಗಳ ಸ್ಥಿರವಹಿವಾಟು ಹಾಗೂ ಬ್ಯಾಂಕ್‌ಗಳು, ರಫ್ತುವಹಿವಾಟುದಾರರಿಂದ ಡಾಲರ್‌ಗಳ ಮಾರಾಟದಲ್ಲಿ ಹೆಚ್ಚಳವಾಗಿದ್ದರಿಂದ, ರೂಪಾಯಿ ಮೌಲ್ಯ ಚೇತರಿಕೆಗೆ ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳ ಕೂಡಾ ರೂಪಾಯಿ ಮೌಲ್ಯ ಚೇತರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 120.22 ಪಾಯಿಂಟ್‌ಗಳ ಏರಿಕೆ ಕಂಡು, 17,17,530.79 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ