ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಮೂಲಸೌಕರ್ಯ ಕ್ಷೇತ್ರಗಳ ಅಭಿವೃದ್ಧಿ ಅಗತ್ಯ:ಪ್ರಧಾನಿ (Manmohan Singh | Infrastructure | 12th Five-Year Plan | Development | Investment)
Bookmark and Share Feedback Print
 
ಭಾರತ 12ನೇ ಪಂಚವಾರ್ಷಿಕ ಯೋಜನೆ(2012-17)ಯಲ್ಲಿ, ಮೂಲಸೌಕರ್ಯ ಕ್ಷೇತ್ರಗಳ ಅಭಿವೃದ್ಧಿಗಾಗಿ 41 ಲಕ್ಷ ಕೋಟಿ ರೂಪಾಯಿಗಳ ಅಗತ್ಯವಿದೆ. ಮೂಲಸೌಕರ್ಯ ಕ್ಷೇತ್ರಗಳಲ್ಲಿ ಹೆಚ್ಚಿನ ಹೂಡಿಕೆಯಿಂದಾಗಿ ದೇಶದ ಆರ್ಥಿಕತೆಯಲ್ಲಿ ಚೇತರಿಕೆಯಾಗಲಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.

ಮೂಲಸೌಕರ್ಯ ಕ್ಷೇತ್ರಗಳ ಅಭಿವೃದ್ಧಿಗಾಗಿ ಹೆಚ್ಚಿನ ಗಮನವಹಿಸಬೇಕಾಗಿದೆ.ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಸದ್ಬಳಕೆ ಮಾಡುವುದು ಅಗತ್ಯವಾಗಿದೆ. ವಿತ್ತ ಸಚಿವಾಲಯ ಹಾಗೂ ಯೋಜನಾ ಆಯೋಗ ಮೂಲಸೌಕರ್ಯ ಕ್ಷೇತ್ರಗಳ ಅಭಿವೃದ್ಧಿಗಾಗಿ ಸೂಕ್ತಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಜಾಗತಿಕ ಆರ್ಥಿಕ ಕುಸಿತದ ಮಧ್ಯೆಯು ದೇಶದ ಆರ್ಥಿಕ ವೃದ್ಧಿ ದರ ಶೇ.6.7ರಷ್ಟಾಗಿತ್ತು. 2008-09ರ ಆರ್ಥಿಕ ಸಾಲಿನ ಅಂತ್ಯಕ್ಕೆ ಜಿಡಿಪಿ ದರ ಶೇ.7.2ಕ್ಕೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

2010-11ರ ಆರ್ಥಿಕ ಸಾಲಿನಲ್ಲಿ ಜಿಡಿಪಿ ದರ ಶೇ.8.5ಕ್ಕೆ ತಲುಪುವ ನಿರೀಕ್ಷೆಯಿದೆ.2011-12ರಲ್ಲಿ ಜಿಡಿಪಿ ದರ ಶೇ.9ಕ್ಕೆ ತಲುಪಬಹುದಾಗಿದೆ. ಆದರೆ ಮತ್ತಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಿದಲ್ಲಿ ಜಿಡಿಪಿ ದರ ಶೇ.10ಕ್ಕೆ ತಲುಪಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ