ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » 2011-12ರಲ್ಲಿ ಜಿಡಿಪಿ ದರ ಶೇ9ಕ್ಕೆ ತಲುಪಲಿದೆ:ಪ್ರಧಾನಿ (Manmohan Singh | Indian economy | Planning Commission)
Bookmark and Share Feedback Print
 
ಭಾರತದ ಆರ್ಥಿಕತೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶೇ.7.2ಕ್ಕೆ ತಲುಪುವ ನಿರೀಕ್ಷೆಯಿದ್ದು,ಮುಂದಿನ ಆರ್ಥಿಕ ಸಾಲಿನ ಅಂತ್ಯಕ್ಕೆ ಶೇ.8.5ಕ್ಕೆ ತಲುಪುವ ವಿಶ್ವಾಸವಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.

12ನೇ ಪಂಚವಾರ್ಷಿಕ ಯೋಜನೆಯಲ್ಲಿ ಯುವಕರಿಗಾಗಿ ಉದ್ಯೋಗ ಸೃಷ್ಟಿ ಬಡತನ ನಿವಾರಣೆ ಸೇರಿದಂತೆ ದೇಶದ ಆರ್ಥಿಕತೆಯನ್ನು ಶೇ.10ಕ್ಕೆ ತಲುಪಿಸುವ ಗುರಿಯನ್ನು ಹೊಂದಲಾಗಿದೆ ಎಂದು ಯೋಜನಾ ಆಯೋಗ ಆಯೋಜಿಸಿದ ಸಮಾರಂಭದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ತಿಳಿಸಿದ್ದಾರೆ.

ಮುಂಬರುವ 2010-11ರ ಅವಧಿಯಲ್ಲಿ ಜಿಡಿಪಿ ದರ ಶೇ.8.5ಕ್ಕೆ ತಲುಪುವ ನಿರೀಕ್ಷೆಯಿದೆ. 2011-12ರ ಅವಧಿಯಲ್ಲಿ ಆರ್ಥಿಕ ವೃದ್ಧಿ ದರ ಶೇ.9ಕ್ಕೆ ತಲುಪುವ ಆಶಾಭಾವನೆಯಿದೆ .ದೇಶದ ಆರ್ಥಿಕತೆಯನ್ನು ಮತ್ತಷ್ಟು ಹೆಚ್ಚಿಸುವ ಸಾಮರ್ಥ್ಯ ಭಾರತಕ್ಕಿದೆ ಎಂದು ಎಂದು ಪ್ರಧಾನಿ ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ