ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಸಕ್ಕರೆ ಉತ್ಪಾದನೆಯಲ್ಲಿ ಶೇ.28ರಷ್ಟು ಹೆಚ್ಚಳ:ಪ್ರಕಾಶ್ (Sugar | production | Maharashtra)
Bookmark and Share Feedback Print
 
ದೇಶದ ಸಕ್ಕರೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಮಹಾರಾಷ್ಟ್ರ, ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಸಕ್ಕರೆ ಉತ್ಪಾದನೆಯಲ್ಲಿ ಶೇ.28ರಷ್ಟು ಏರಿಕೆಯಾಗಿ 5.74 ಮಿಲಿಯನ್ ಟನ್‌ಗಳಿಗೆ ಏರಿಕೆಯಾಗಿದೆ

ಮಾರ್ಚ್ 22ಕ್ಕೆ ಅಂತ್ಯಗೊಂಡಂತೆ ರಾಜ್ಯದ ಸಕ್ಕರೆ ಉತ್ಪಾದನೆ 5.74 ಮಿಲಿಯನ್ ಟನ್‌ಗಳಿಗೆ ತಲುಪಿದೆ. ಕಳೆದ ವರ್ಷದ ಅವಧಿಯಲ್ಲಿ 4.47 ಮಿಲಿಯನ್ ಟನ್ ಸಕ್ಕರೆ ಉತ್ಪಾದಿಸಲಾಗಿತ್ತು ಎಂದು ಸಹಕಾರಿ ಸಕ್ಕರೆ ಕಾರ್ಖಾನೆಗಳ ಸಂಘದ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್ ನೈಕ್ನಾವರೆ ಹೇಳಿದ್ದಾರೆ.

ರಾಜ್ಯದ ಒಟ್ಟು ಸಕ್ಕರೆ ಉತ್ಪಾದನೆ ಪ್ರಸಕ್ತ ವರ್ಷದ ಅವಧಿಯಲ್ಲಿ 6 ಮಿಲಿಯನ್ ಟನ್‌ಗಳಿಗಿಂತ ಹೆಚ್ಚಾಗಲಿದೆ ಎಂದು ಪ್ರಕಾಶ್ ತಿಳಿಸಿದ್ದಾರೆ.

ಕಳೆದ 2008-09ರ ಅವಧಿಯಲ್ಲಿ,ಮಹಾರಾಷ್ಟ್ರ 4.57 ಮಿಲಿಯನ್ ಟನ್‌ಗಳಷ್ಟು ಸಕ್ಕರೆಯನ್ನು ಉತ್ಪಾದಿಸಲಾಗುತ್ತಿತ್ತು.ಪ್ರಸ್ತುತ ಮುಂಬೈನಲ್ಲಿ ಸಗಟು ಸಕ್ಕರೆ ದರ ಪ್ರತಿ ಕೆಜಿಗೆ 30 ರೂಪಾಯಿಗಳಾಗಿದ್ದು, ಚಿಲ್ಲರೆ ಮಾರಾಟದಲ್ಲಿ ಪ್ರತಿ ಕೆಜಿಗೆ 34 ರೂಪಾಯಿಗಳಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸಕ್ಕರೆ, ಉತ್ಪಾದನೆ, ಮಹಾರಾಷ್ಟ್ರ