ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ರೂಪಾಯಿ ಮೌಲ್ಯದಲ್ಲಿ ಮತ್ತೆ ಕುಸಿತ (Rupee | Dollar | Foreign funds | Capital outflows | Forex)
Bookmark and Share Feedback Print
 
ಏಷ್ಯಾ ಕರೆನ್ಸಿಗಳು ಎದುರು ಡಾಲರ್ ಮೌಲ್ಯದ ಹೆಚ್ಚಳ ಹಾಗೂ ವಿದೇಶಿ ಬಂಡವಾಳದ ಹೊರಹರಿವಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 9 ಪೈಸೆ ಕುಸಿತವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ,2ಪೈಸೆ ಕುಸಿತ ಕಂಡು 45.60/61ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 9 ಪೈಸೆ ಕುಸಿತ ಕಂಡು 45.69 ರೂಪಾಯಿಗಳಿಗೆ ತಲುಪಿದೆ.

ಬುಧವಾರದಂದು ರಾಮನವಮಿ ಹಬ್ಬದ ನಿಮಿತ್ಯ ವಿದೇಶಿ ವಿನಿಮಯ ಮಾರುಕಟ್ಟೆಗೆ ರಜೆಯನ್ನು ಘೋಷಿಸಲಾಗಿತ್ತು.

ಏಷ್ಯಾ ಕರೆನ್ಸಿಗಳು ಎದುರು ಡಾಲರ್ ಮೌಲ್ಯದ ಹೆಚ್ಚಳ ಹಾಗೂ ವಿದೇಶಿ ಬಂಡವಾಳದ ಹೊರಹರಿವಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 9 ಪೈಸೆ ಕುಸಿತವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 61.16 ಪಾಯಿಂಟ್‌ಗಳ ಕುಸಿತ ಕಂಡು 17,389.186 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ