ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ (Rupee| Dollar | Forex | Foreign funds | Stock markets)
Bookmark and Share Feedback Print
 
ಶೇರುಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವಿನಲ್ಲಿ ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 3ಪೈಸ ಏರಿಕೆಯಾಗಿ 45.44 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 11ಪೈಸೆ ಏರಿಕೆ ಕಂಡು 45.49/50ರೂಪಾಯಿಗಳಿಗೆ ಮುಕ್ತಾಯವಾಗಿತ್ತು.ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ 5 ಪೈಸೆ ಏರಿಕೆಯಾಗಿ 45.44 ರೂಪಾಯಿಗಳಾಗಿವೆ.

ರಫ್ತು ವಹಿವಾಟುದಾರರು ಹಾಗೂ ಬ್ಯಾಂಕ್‌ಗಳು ಡಾಲರ್ ಮಾರಾಟ ಹಾಗೂ ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ದುರ್ಬಲಗೊಂಡ ಹಿನ್ನೆಲೆಯಲ್ಲಿ ರೂಪಾಯಿ ಮೌಲ್ಯದ ಚೇತರಿಕೆಗೆ ಕಾರಣವಾಗಿದೆ ಎಂದು ಡೀಲರ್‌ಗಳು ತಿಳಿಸಿದ್ದಾರೆ.

ಅದನ್ನು ಹೊರತುಪಡಿಸಿ, ಶೇರುಪೇಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳ ಕೂಡಾ ರೂಪಾಯಿ ಮೌಲ್ಯ ಹೆಚ್ಚಳಕ್ಕೆ ಬೆಂಬಲಿಸಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 80 ಪಾಯಿಂಟ್‌‌ಗಳ ಏರಿಕೆ ಕಂಡು 17,640.25 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ