ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಕೆನಡಾದಿಂದ 5 ಬಿನ್‌ ಡಾಲರ್ ಹೂಡಿಕೆ ನಿರೀಕ್ಷೆ:ಕಮಲ್‌ನಾಥ್ (Kamal Nath | Canada | India | Road sector | Investment)
Bookmark and Share Feedback Print
 
ಮುಂಬರುವ ಮೂರರಿಂದ ನಾಲ್ಕು ವರ್ಷಗಳ ಅವಧಿಯಲ್ಲಿ ರಸ್ತೆ ಅಭಿವೃದ್ಧಿ ಯೋಜನೆಗೆ ಕೆನಡಾದಿಂದ ಸುಮಾರು 22,800 ಕೋಟಿ ರೂಪಾಯಿಗಳ ಹೂಡಿಕೆಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ಕಮಲ್‌ನಾಥ್ ಹೇಳಿದ್ದಾರೆ.

ಕೆನಡಾದ ಸಚಿವರು ಹಾಗೂ ಬೃಹತ್ ಆರ್ಥಿಕ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಭೆಯನ್ನು ನಡೆಸಿದ ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ್ ಕಮಲ್‌ನಾಥ್, ಕೆನಡಾ ರಸ್ತೆ ಯೋಜನೆಯಲ್ಲಿ ಬೃಹತ್ ಹೂಡಿಕೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೆನಡಾದ ನಿವೃತ್ತಿ ವೇತನ ಹಾಗೂ ಹಣಕಾಸು ಸಂಸ್ಥೆಗಳು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿವೆ ಎಂದು ಕಮಲ್‌ನಾಥ್ ತಿಳಿಸಿದ್ದಾರೆ.

ರಸ್ತೆ ಅಭಿವೃದ್ಧಿ ಯೋಜನೆಗೆ ಖಾಸಗಿ ಕ್ಷೇತ್ರಕ್ಕೆ 40 ಬಿಲಿಯನ್ ಡಾಲರ್ ಹಾಗೂ 10 ಬಿಲಿಯನ್ ಡಾಲರ್ ವಿದೇಶಿ ಬಂಡವಾಳ ಹೂಡಿಕೆಯ ಅಗತ್ಯವಿದೆ. ಕೆನಡಾದಿಂದ 5 ಬಿಲಿಯನ್ ಡಾಲರ್ ಹೂಡಿಕೆಯ ನಿರೀಕ್ಷೆಯಿದೆ. ಕೇಂದ್ರ ಸರಕಾರ ಮುಂದಿನ ಎರಡು ತಿಂಗಳಲ್ಲಿ ಒಂಬತ್ತು ಬೃಹತ್ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ ಎಂದರು.

ಕೆನಡಾದ ಕೈಗಾರಿಕೋದ್ಯಮ ಸಚಿವ ಟೋನಿ ಕ್ಲೆಮೆಂಟ್, ಸಾರಿಗೆ ಸಚಿವ ಜಾನ್ ಬೈರ್ಡ್ ಹಾಗೂ ಇತರ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ಕಮಲ್‌ನಾಥ್ ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ