ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯದಲ್ಲಿ ಬಲವರ್ಧನೆ (Rupee| Forex|Dollar | Stock markets)
Bookmark and Share Feedback Print
 
ದೇಶಿಯ ಶೇರುಪೇಟೆಯಲ್ಲಿ ವಿದೇಶಿ ಬಂಡವಾಳದ ಹೊರಹರಿವಿನ ಮಧ್ಯೆಯು ಇತರ ಕರೆನ್ಸಿಗಳ ಸ್ಥಿರವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 13 ಪೈಸೆ ಏರಿಕೆಯಾಗಿ 45.10 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 18 ತಿಂಗಳ ಗರಿಷ್ಠ 26 ಪೈಸೆ ಏರಿಕೆ ಕಂಡು 45.23/24ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ 13 ಪೈಸೆ ಏರಿಕೆ ಕಂಡು 45.10 ರೂಪಾಯಿಗಳಿಗೆ ತಲುಪಿದೆ.

ರಫ್ತು ವಹಿವಾಟುದಾರರು ಹಾಗೂ ಬ್ಯಾಂಕ್‌ಗಳಿಂದ ಡಾಲರ್‌ಗಳ ಮಾರಾಟದಲ್ಲಿ ಹೆಚ್ಚಳ ಹಾಗೂ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತದಿಂದಾಗಿ ರೂಪಾಯಿ ಚೇತರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಅದನ್ನು ಹೊರತುಪಡಿಸಿ, ದೇಶಿಯ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ರೂಪಾಯಿ ಮೌಲ್ಯ ಚೇತರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್ಗಳು ತಿಳಿಸಿದ್ದಾರೆ.

ಮುಂಬೈ ಶೇರುಪೇಟೆಯ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 80.38 ಪಾಯಿಂಟ್‌ಗಳ ಏರಿಕೆ ಕಂಡು, 17,725.14 ರೂಪಾಯಿಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ