ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ರೂಪಾಯಿ ಮೌಲ್ಯದಲ್ಲಿ ಚೇತರಿಕೆ (Rupee|Market|forex|dollar)
Bookmark and Share Feedback Print
 
ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ದುರ್ಬಲ ವಹಿವಾಟು ಹಾಗೂ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 3 ಪೈಸೆ ಏರಿಕೆ ಕಂಡು 44.92 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 28 ಪೈಸೆ ಏರಿಕೆ ಕಂಡು 44.95/96 ರೂಪಾಯಿಗಳಿಗೆ ತಲುಪಿತ್ತು.ಇಂದಿನ ಆರಂಭಿಕ ವಹಿವಾಟಿನಲ್ಲಿ 3ಪೈಸೆ ಏರಿಕೆ ಕಂಡು 44.92 ರೂಪಾಯಿಗಳಿಗೆ ತಲುಪಿದೆ.

ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವು ಹಾಗೂ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದಲ್ಲಿ ದುರ್ಬಲವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ, ಆರಂಭಿಕ ವಹಿವಾಟಿನಲ್ಲಿ 71.02 ಪಾಯಿಂಟ್‌ಗಳ ಏರಿಕೆ ಕಂಡು 17,782.37 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ