ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಶೇ.9ರ ವೇಗದ ಅಭಿವೃದ್ಧಿ ಸವಾಲಾಗಿದೆ:ಮುಖರ್ಜಿ (Financial meltdown| Growth | Pranab Mukherjee | Fiscal year)
Bookmark and Share Feedback Print
 
ಆಹಾರ ಭಧ್ರತೆಯನ್ನು ಖಚಿತಪಡಿಸಿಕೊಂಡು ವಾರ್ಷಿಕ ಆರ್ಥಿಕ ವೃದ್ಧಿ ದರ ಶೇ.9ಕ್ಕೆ ತಲುಪುವಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ವಿತ್ತಖಾತೆ ಸಚಿವ ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ದೇಶಿಯ ಜಿಡಿಪಿ ದರವನ್ನು ಆದಷ್ಟು ಶೀಘ್ರದಲ್ಲಿ ಶೇ.9ಕ್ಕೆ ತಲುಪಿಸುವ ನಿಟ್ಟಿನಲ್ಲಿ ಹಲವಾರು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ವಿಶ್ವವಿದ್ಯಾಲಯ ಆಯೋಜಿಸಿದ ಕಾರ್ಯಕ್ರಮದಲ್ಲಿ ಸಚಿವ ಮುಖರ್ಜಿ ತಿಳಿಸಿದ್ದಾರೆ.

ಜಾಗತಿಕ ಆರ್ಥಿಕ ಕುಸಿತದಿಂದಾಗಿ ದೇಶದ ಆರ್ಥಿಕ ವೃದ್ಧಿ ದರ ಶೇ.9ರಿಂದ ಶೇ.6.7ಕ್ಕೆ ಕುಸಿತ ಕಂಡಿತ್ತು.ಪ್ರಸಕ್ತ ವರ್ಷದ ಅವಧಿಯಲ್ಲಿ ಜಿಡಿಪಿ ದರ ಶೇ.7.2ಕ್ಕೆ ತಲುಪುವ ನಿರೀಕ್ಷೆಯಿದೆ. ಮುಂದಿನ ವರ್ಷಾಂತ್ಯಕ್ಕೆ ಆರ್ಥಿಕ ವೃದ್ಧಿ ದರ ಶೇ.8.5ಕ್ಕೆ ತಲುಪುವ ವಿಶ್ವಾಸವಿದೆ ಎಂದು ವಿತ್ತಸಚಿವ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ