ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ತೈಲ ಕಂಪೆನಿಗಳ ನಷ್ಟ ವಾರ್ಷಿಕ 79,670 ಕೋಟಿ ರೂ. (IOC | BPC | HPC | loss | Fiscal)
Bookmark and Share Feedback Print
 
ಸರಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೋರೇಶನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪೆನಿಗಳು ತೈಲ ಮಾರಾಟದಲ್ಲಿ ಶೇ.66ರಷ್ಟು ಹೆಚ್ಚಳವಾಗಿದ್ದರಿಂದ ಪ್ರಸಕ್ತ ಆರ್ಥಿಕ ವರ್ಷದಲ್ಲಿ 79,670 ಕೋಟಿ ರೂಪಾಯಿಗಳಷ್ಟು ನಷ್ಟ ಅನುಭವಿಸಿದೆ ಎಂದು ಮೂಲಗಳು ತಿಳಿಸಿವೆ.

ಮೂರು ತೈಲ ಕಂಪೆನಿಗಳು ಮಾರುಕಟ್ಟೆಗಳ ದರಕ್ಕಿಂತ ಕಡಿಮೆ ದರದಲ್ಲಿ ಪೆಟ್ರೋಲ್ ,ಡೀಸೆಲ್ ಅಡುಗೆ ಅನಿಲ ಹಾಗೂ ಸೀಮೆಎಣ್ಣೆಯನ್ನು ಮಾರಾಟ ಮಾಡಿದ್ದರಿಂದ 47,960 ಕೋಟಿ ರೂಪಾಯಿಗಳ ನಷ್ಟವನ್ನು ಅನುಭವಿಸಿವೆ ಎಂದು ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಮೂರು ತೈಲ ಕಂಪೆನಿಗಳು ಇಂಧನ ಮಾರಾಟದಿಂದ ಪ್ರತಿನಿತ್ಯ 211ಕೋಟಿ ರೂಪಾಯಿಗಳ ನಷ್ಟ ಅನುಭವಿಸುತ್ತಿವೆ ಎಂದು ಹೇಳಿದ್ದಾರೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ತೈಲ ಕಂಪೆನಿಗಳಿಗೆ ಎದುರಾದ ನಷ್ಟವನ್ನು ಭರಿಸುವ ಕುರಿತಂತೆ ಸರಕಾರ ಇಲ್ಲಿಯವರೆಗೆ ಯಾವುದೇ ಹೇಳಿಕೆ ನೀಡಿಲ್ಲ. ಆದರೆ, ತೈಲ ಕಂಪೆನಿಗಳ ನಷ್ಟವನ್ನು ಹೊಂದಿಸಲು ಸರಕಾರ ಯೋಜನೆಯನ್ನು ರೂಪಿಸಿದೆ ಎಂದು ವಿತ್ತಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಇಂಡಿಯನ್ ಆಯಿಲ್ ಕಂಪೆನಿ,ಬಿಪಿಸಿಎಲ್ ಮತ್ತು ಎಚ್‌ಪಿಸಿಎಲ್ ಕಂಪೆನಿಗಳ ಅಡುಗೆ ಅನಿಲ ಮತ್ತು ಸೀಮೆಎಣ್ಣೆ ಮಾರಾಟದಿಂದ ಎದುರಾದ 12,000 ಕೋಟಿ ರೂಪಾಯಿಗಳ ನಷ್ಟವನ್ನು ಮಾತ್ರ ಸರಕಾರ ಭರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂಡಿಯನ್ ಆಯಿಲ್ ಕಾರ್ಪೋರೇಶನ್ 7,100.18 ಕೋಟಿ ರೂಪಾಯಿ, ಬಿಪಿಸಿಎಲ್ 2,370.77 ಕೋಟಿ ರೂಪಾಯಿ ಹಾಗೂ ಎಚ್‌ಪಿಸಿಎಲ್‌ 2,529.05 ಕೋಟಿ ರೂಪಾಯಿಗಳಷ್ಟು ಮಾತ್ರ ಸರಕಾರದಿಂದ ಅನುದಾನ ಪಡೆಯಬಹುದಾಗಿದೆ ಎಂದು ವಿತ್ತಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ